ಪ್ರಧಾನ ಮಂತ್ರಿಯವರ ಕಛೇರಿ
ಮೇ 31 ರಂದು ಶಿಮ್ಲಾಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ 'ಗರೀಬ್ ಕಲ್ಯಾಣ್ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದಾರೆ
ಮೋದಿ ಸರ್ಕಾರ ಎಂಟು ವರ್ಷ ಪೂರೈಸಿದ ಸಂದರ್ಭದಲ್ಲಿ ದೇಶಾದ್ಯಂತ ಗರೀಬ್ ಕಲ್ಯಾಣ್ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ
ದೇಶಾದ್ಯಂತ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ನೇರವಾಗಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ
ಒಂಬತ್ತು ಕೇಂದ್ರ ಸಚಿವಾಲಯಗಳು/ ಇಲಾಖೆಗಳ ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಲಿದ್ದಾರೆ
ಪಿ.ಎಂ.- ಕಿಸಾನ್ ಯೋಜನೆಯ 11 ನೇ ಕಂತನ್ನು ಪ್ರಧಾನಮಂತ್ರಿ ಬಿಡುಗಡೆ ಮಾಡಲಿದ್ದಾರೆ
Posted On:
30 MAY 2022 12:29PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 31, 2022ರಂದು ಶಿಮ್ಲಾ ಮತ್ತು, ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿಯವರು 'ಗರೀಬ್ ಕಲ್ಯಾಣ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಈ ಸುಸಂದರ್ಭದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ದೇಶದಾದ್ಯಂತ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಸಮ್ಮೇಳನವು ದೇಶಾದ್ಯಂತ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ನೇರವಾಗಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಪರಿಕಲ್ಪನೆಯನ್ನು ಹೊಂದಿದೆ ಮತ್ತು ಸರ್ಕಾರವು ನಡೆಸುತ್ತಿರುವ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರ ಪ್ರತಿಕ್ರಿಯೆಯನ್ನು ನೇರವಾಗಿ ಪಡೆಯಲು ಮಾಡುವ ಪ್ರಯತ್ನವಾಗಿದೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ವಿಧಾನಸಭೆಯ ಸದಸ್ಯರು ಮತ್ತು ಇತರ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ಬೆಳಗ್ಗೆ 09:45 ಗಂಟೆಗೆ ದೇಶದಾದ್ಯಂತ ತಮ್ಮ ತಮ್ಮ ಸ್ಥಳಗಳಲ್ಲಿ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸುವ ಮೂಲಕ 'ಗರೀಬ್ ಕಲ್ಯಾಣ್ ಸಮ್ಮೇಳನ'ವು ಪ್ರಾರಂಭವಾಗುತ್ತದೆ. ಸುಮಾರು ಬೆಳಗ್ಗೆ 11:00 ಗಂಟೆಗೆ ಪ್ರಧಾನಮಂತ್ರಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಇದರೊಂದಿಗೆ, ವಿವಿಧ ರಾಜ್ಯ ಮತ್ತು ಸ್ಥಳೀಯ ಮಟ್ಟದ ಕಾರ್ಯಕ್ರಮಗಳು ಸ್ಥಳೀಯ ವ್ಯಾಪ್ತಿಯಲ್ಲಿ ಚರ್ಚೆಗೆ ಬರುತ್ತವೆ ಮತ್ತು ಸಮ್ಮೇಳನವನ್ನು ರಾಷ್ಟ್ರೀಯ ಮಟ್ಟದಲ್ಲಿ ಸಮಾವೇಶಗೊಳಿಸಲಾಗುತ್ತದೆ. ಸಮ್ಮೇಳನದಲ್ಲಿ, ಭಾರತ ಸರ್ಕಾರದ ಒಂಬತ್ತು ಸಚಿವಾಲಯಗಳು/ ಇಲಾಖೆಗಳ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಅವರು ನೇರವಾಗಿ ಸಂವಾದ ನಡೆಸಲಿದ್ದಾರೆ.
ದೇಶದಾದ್ಯಂತ ಆಯೋಜಿಸಲಾಗುತ್ತಿರುವ ಫ್ರೀವೀಲಿಂಗ್ ಸಂವಾದವು ಸಾರ್ವಜನಿಕರಿಂದ ಉಚಿತ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆಯನ್ನು ಪಡೆಯಲು, ಜನರ ಜೀವನದಲ್ಲಿ ಕಲ್ಯಾಣ ಯೋಜನೆಗಳ ಪ್ರಭಾವವನ್ನು ಅರ್ಥಮಾಡಿಕೊಳ್ಳಲು ಮತ್ತು ವಿವಿಧ ಸರ್ಕಾರಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಒಮ್ಮುಖ ಮತ್ತು ಶುದ್ಧತ್ವವನ್ನು ಅನ್ವೇಷಿಸುವ ಗುರಿಯನ್ನು ಹೊಂದಿದೆ. ದೇಶದ ನಾಗರಿಕರ ಜೀವನ ಸೌಕರ್ಯ-ಸೌಲಭ್ಯ ವ್ಯವಸ್ಥೆಗಳನ್ನು ಸುಧಾರಿಸಲು, ಉದ್ಧೇಶಿತ ಜನರ ಬಳಿಗೆ ಸರ್ಕಾರಿ ಕಾರ್ಯಕ್ರಮಗಳ ತಲುಪುವಿಕೆ ಮತ್ತು ವಿತರಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವುದು ಈ ಪ್ರಯತ್ನವಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಮ್-ಕಿಸಾನ್ ) ಯೋಜನೆಯಡಿಯಲ್ಲಿ ನೀಡುವ ಆರ್ಥಿಕ ಪ್ರಯೋಜನದ 11 ನೇ ಕಂತುನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ಸುಮಾರು ರೂ. 21,000 ಕೋಟಿ ಮೊತ್ತದ ಹಣವನ್ನು ವರ್ಗಾವಣೆಗೊಳಿಸಲಾಗುವುದು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ದೇಶಾದ್ಯಂತ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಮ್-ಕಿಸಾನ್ ) ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
***
(Release ID: 1829531)
Visitor Counter : 224
Read this release in:
Marathi
,
Tamil
,
Assamese
,
English
,
Urdu
,
Hindi
,
Bengali
,
Manipuri
,
Punjabi
,
Gujarati
,
Odia
,
Telugu
,
Malayalam