ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ


ಪಿಎಂಎನ್‌ಆರ್‌ಎಫ್ ನಿಂದ ಪರಿಹಾರ ಘೋಷಣೆ

Posted On: 05 JUN 2022 9:23PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಬಸ್ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.
 
ಪ್ರಧಾನ ಮಂತ್ರಿಯವರ ಕಾರ್ಯಾಲಯವು ಈ ಕುರಿತು ಟ್ವೀಟ್ ಮಾಡಿದೆ;
"ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತವು ತುಂಬಾ ನೋವು ತಂದಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ: ಪ್ರಧಾನಿ @narendramodi "

"ಉತ್ತರಾಖಂಡದಲ್ಲಿ ನಡೆದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ನೀಡಲಾಗುವುದು."

*****

 (Release ID: 1831526) Visitor Counter : 152