ಸಂಪುಟ
ಆರೋಗ್ಯ ವಲಯಕ್ಕೆ ಸಂಬಂಧಿಸಿದಂತೆ ಭಾರತ-ಅಮೆರಿಕ ನಡುವಿನ ಒಪ್ಪಂದಕ್ಕೆ ಸಂಪುಟ ಅನುಮೋದನೆ
Posted On:
08 JUN 2022 4:44PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಭಾರತದ ಜೈವಿಕ ತಂತ್ರಜ್ಞಾನ ಇಲಾಖೆಯ(ಡಿಬಿಟಿ) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹಾಗೂ ಅಮೆರಿಕದ ಅಂತಾರಾಷ್ಟ್ರೀಯ ಲಸಿಕೆ ಉಪಕ್ರಮ(ಐಎವಿಐ)ದ ನಡುವೆ ಎಚ್ಐವಿ, ಕ್ಷಯರೋಗ, ಕೋವಿಡ್-19 ಮತ್ತು ಇತರೆ ಹೊಸದಾಗಿ ಕಾಣಿಸಿಕೊಳ್ಳುತ್ತಿರುವ ಸಾಂಕ್ರಾಮಿಕ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕಾಯಿಲೆಗಳನ್ನು ನಿಯಂತ್ರಿಸಲು ಹೊಸ, ಸುಧಾರಿತ ಮತ್ತು ನವೀನ ಜೈವಿಕ ವೈದ್ಯಕೀಯ ಸಾಧನಗಳು ಮತ್ತು ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಕುರಿತ ಒಪ್ಪಂದಕ್ಕೆ ಅನುಮೋದನೆ ನೀಡಿದೆ.
ಈ ತಿಳಿವಳಿಕೆ ಜ್ಞಾಪನಾ ಪತ್ರದಿಂದಾಗಿ ಪರಸ್ಪರ ಹಿತಾಸಕ್ತಿಯ ಅಂತಾರಾಷ್ಟ್ರೀಯ ವೈಜ್ಞಾನಿಕ ಮತ್ತು ತಾಂತ್ರಿಕ ಸಹಕಾರ ಸಂಬಂಧದ ಚೌಕಟ್ಟಿನೊಳಗೆ ಭಾರತ-ಅಮೆರಿಕ ನಡುವಿನ ಸಂಬಂಧ ಮತ್ತಷ್ಟು ಬಲವರ್ಧನೆಯಾಗಲಿದೆ.
*****
(Release ID: 1832414)
Visitor Counter : 217
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam