ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

'ಮಹಿಳಾ ಸಬಲೀಕರಣದ 8 ವರ್ಷಗಳು' ಕುರಿತ ವಿವರಗಳನ್ನು ಹಂಚಿಕೊಂಡ ಪ್ರಧಾನಿ


ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸಲು ಹೊಸ ಮಾದರಿಯನ್ನು ರೂಪಿಸಲಾಗುತ್ತಿದೆ

Posted On: 09 JUN 2022 5:16PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾರಿ ಶಕ್ತಿಯ ಸಬಲೀಕರಣಕ್ಕಾಗಿ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಒಳಗೊಂಡಿರುವ, narendramodi.in ವೆಬ್‌ಸೈಟ್‌ನಲ್ಲಿ ಲಭ್ಯವಿರುವ ವಿವಿಧ ಲೇಖನಗಳ ವಿವರಗಳನ್ನು  ಹಂಚಿಕೊಂಡಿದ್ದಾರೆ.
 
ಮಹಿಳೆಯರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಸರಕಾರದ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳ ಬಗ್ಗೆ ಮಾಹಿತಿ ಹೊಂದಿರುವ MyGov ನ ಟ್ವೀಟ್ ಥ್ರೆಡ್ ಅನ್ನು ಸಹ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ. 

ಈ ಬಗ್ಗೆ ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ: 
"ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸಲು ಹೊಸ ಮಾದರಿಯನ್ನು ಹೇಗೆ ಸೃಷ್ಟಿಸಲಾಗುತ್ತಿದೆ ಎಂಬುದರ ಬಗ್ಗೆ ಈ ಲೇಖನಗಳನ್ನು ಓದಿದರೆ ನಿಮಗೆ ಖುಷಿಯಾಗುತ್ತದೆ. ಈ ಪ್ರಯತ್ನಗಳು ವೈವಿಧ್ಯಮಯ ವಲಯಗಳನ್ನು ಒಳಗೊಂಡಿವೆ ಮತ್ತು ಮಹಿಳೆಯರಿಗೆ ಹೆಚ್ಚಿನ ಘನತೆ ಮತ್ತು ಅವಕಾಶಗಳನ್ನು ಖಾತರಿಪಡಿಸಿವೆ. #8YearsOfWomenEmpowerment" 

"ಭಾರತದ ನಾರಿ ಶಕ್ತಿಯನ್ನು ಸಶಕ್ತಗೊಳಿಸುವ ಉಪಕ್ರಮಗಳ ಬಗ್ಗೆ ಸಮಗ್ರ ಮಾಹಿತಿ. #8YearsOfWomenEmpowerment"

 

*****(Release ID: 1832745) Visitor Counter : 136