ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಾಬೂಲ್ ನ ಕರ್ತೆ ಪರ್ವಾನ್ ಗುರುದ್ವಾರದ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಪ್ರಧಾನಮಂತ್ರಿ ಅವರು ಖಂಡಿಸಿದ್ದಾರೆ

प्रविष्टि तिथि: 18 JUN 2022 10:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಫ್ಘಾನಿಸ್ತಾನದ ಕಾಬೂಲ್ ನಲ್ಲಿರುವ ಕರ್ತೆ ಪರ್ವಾನ್ ಗುರುದ್ವಾರದ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಹಾಗೆಯೇ ಅವರು ಭಕ್ತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದರು.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,

“ ಕಾಬೂಲ್ ನ ಕರ್ತೆ ಪರ್ವಾನ್ ಗುರುದ್ವಾರದ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯಿಂದ ಆಘಾತವಾಗಿದೆ. ಈ ಅನಾಗರಿಕ ದಾಳಿಯನ್ನು ನಾನು ಖಂಡಿಸುತ್ತೇನೆ ಮತ್ತು ಭಕ್ತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ,’’ ಎಂದಿದ್ದಾರೆ.

 

 

*****

 


(रिलीज़ आईडी: 1835178) आगंतुक पटल : 198
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu