ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಸಭೆ.

Posted On: 27 JUN 2022 9:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜೂನ್ 27ರಂದು ಜರ್ಮನಿಯ ಶ್ಲೋಸ್ ಎಲ್ಮೌದಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಕೊ ವಿಡೋಡೋ ಅವರನ್ನು ಭೇಟಿ ಮಾಡಿದರು.

ಇಂಡೋನೇಷ್ಯಾ ಪ್ರಸ್ತುತ ಜಿ-20 ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವುದಕ್ಕಾಗಿ ಪ್ರಧಾನಮಂತ್ರಿಯವರು ದೇಶದ ಅಧ್ಯಕ್ಷ ವಿಡೋಡೋ ಅವರನ್ನು ಅಭಿನಂದಿಸಿದರು. ಭಾರತದ ಮುಂಬರುವ ಜಿ-20 ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಗಳು ನಡೆದವು. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

******


(Release ID: 1837615) Visitor Counter : 132