ಪ್ರಧಾನ ಮಂತ್ರಿಯವರ ಕಛೇರಿ

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಬಸ್ ಅಪಘಾತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ 


ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಮ್ಎನ್ಆರ್ಎಫ್) ಪರಿಹಾರ ಧನ ಘೋಷಣೆ

Posted On: 04 JUL 2022 11:31AM by PIB Bengaluru


 ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.  . ಪ್ರಧಾನಮಂತ್ರಿಯವರು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದವರಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನ ಮಂತ್ರಿಯವರ ಕಚೇರಿಯ ಟ್ವೀಟ್  ಹೀಗಿದೆ:
"ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನಮ್ಮೆಲ್ಲರ ಸಹಾನುಭೂತಿಯು ದುಃಖಿತ ಕುಟುಂಬಗಳೊಂದಿಗೆ ಇರುತ್ತದೆ.  ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi "

"ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ   ಪಿಎಮ್ಎನ್ಆರ್ಎಫ್ ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ಅನುಮೋದಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು. "

 

*******

 



(Release ID: 1839111) Visitor Counter : 137