ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ.


ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೂ ಅಭಿನಂದನೆ.

Posted On: 30 JUN 2022 8:32PM by PIB Bengaluru

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು

"ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @mieknathshinde ಅವರನ್ನು ನಾನು ಅಭಿನಂದಿಸುತ್ತೇನೆ. ತಳಮಟ್ಟದಿಂದ ಬಂದು ನಾಯಕರಾಗಿರುವ ಅವರು ರಾಜಕೀಯ, ಶಾಸಕಾಂಗ ಮತ್ತು ಆಡಳಿತಾತ್ಮಕವಾಗಿ ಶ್ರೀಮಂತ ಅನುಭವವನ್ನು ಹೊಂದಿದ್ದಾರೆ. ಅವರು ಮಹಾರಾಷ್ಟ್ರವನ್ನು ಉನ್ನತ ಎತ್ತರಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಶ್ರಮಿಸುತ್ತಾರೆ ಎಂಬ ವಿಶ್ವಾಸ ನನಗಿದೆ." ಎಂದು ತಿಳಿಸಿದ್ದಾರೆ.

 

ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು,

"ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @Dev_Fadnavis ಅವರಿಗೆ ಅಭಿನಂದನೆಗಳು. ಅವರು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಅನುಭವ ಮತ್ತು ಪರಿಣತಿ ಸರ್ಕಾರಕ್ಕೆ ಆಸ್ತಿಯಾಗಲಿದೆ. ಅವರು ಮಹಾರಾಷ್ಟ್ರದ ಪ್ರಗತಿಯ ಪಥವನ್ನು ಮತ್ತಷ್ಟು ಬಲಪಡಿಸುತ್ತಾರೆ ಎಂಬ ಖಾತ್ರಿ ನನಗಿದೆ" ಎಂದು ತಿಳಿಸಿದ್ದಾರೆ.

 

*********


(Release ID: 1839359) Visitor Counter : 137