ಪ್ರಧಾನ ಮಂತ್ರಿಯವರ ಕಛೇರಿ

ಪಿ. ಗೋಪಿನಾಥನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರು ಸಂತಾಪ ಸೂಚಿಸಿದರು

Posted On: 06 JUL 2022 10:05AM by PIB Bengaluru

ಖ್ಯಾತ ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶ್ರೀ ಪಿ. ಗೋಪಿನಾಥನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. 

 

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

 

"ಶ್ರೀ ಪಿ. ಗೋಪಿನಾಥನ್ ನಾಯರ್ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಮತ್ತು ಗಾಂಧಿ ತತ್ವಗಳಿಗೆ ಇದ್ದ ಅವರ ಅಚಲವಾದ ಬದ್ಧತೆಗಾಗಿ ಸ್ಮರಿಸಲ್ಪಡುತ್ತಾರೆ. ಅವರ ನಿಧನದಿಂದ ದುಃಖವಾಗಿದೆ. ನನ್ನ ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ."

 

 

*******(Release ID: 1839566) Visitor Counter : 152