ಪ್ರಧಾನ ಮಂತ್ರಿಯವರ ಕಛೇರಿ

ಚಿತ್ರಕೂಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿಮಂತ್ರಿಗಳ ಸಂತಾಪ

Posted On: 09 JUL 2022 4:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿ ಕಾರ್ಯಾಲಯ ಹೀಗೆ ಟ್ವೀಟ್ ಮಾಡಿದೆ:

"ಚಿತ್ರಕೂಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತ ತೀವ್ರ ಆಘಾತ ಮತ್ತು ನೋವು ತಂದಿದೆ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ: ಪ್ರಧಾನಿ"

 

********



(Release ID: 1840454) Visitor Counter : 140