ಕಲ್ಲಿದ್ದಲು ಸಚಿವಾಲಯ
azadi ka amrit mahotsav

ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರಗಳು ರಾಷ್ಟ್ರ ನಿರ್ಮಾಣಕ್ಕೆ ಗಣನೀಯ ಕೊಡುಗೆ ನೀಡುತ್ತಿವೆ - ಸಚಿವ ಶ್ರೀ ಪ್ರಲ್ಹಾದ್ ಜೋಶಿ


ಕಲ್ಲಿದ್ದಲು ಮತ್ತು ಗಣಿ ಸಿಪಿಎಸ್‌ಇ ಗಳ ಅಧಿಕೃತವಲ್ಲದ ನಿರ್ದೇಶಕರಿಗೆ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿದರು

Posted On: 12 JUL 2022 3:07PM by PIB Bengaluru

ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಮಾತನಾಡಿ, ಪ್ರಧಾನಮಂತ್ರಿಯವರ ಆತ್ಮನಿರ್ಭರ ಭಾರತದ ದೃಷ್ಟಿಕೋನವನ್ನು ಇಟ್ಟುಕೊಂಡು ದೇಶದಲ್ಲಿ ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರವು ರಾಷ್ಟ್ರ ನಿರ್ಮಾಣ ಮತ್ತು ಸ್ವಾವಲಂಬನೆಯತ್ತ ಪ್ರಮುಖ ಪಾತ್ರ ವಹಿಸುತ್ತಿದೆ. ಎಂದು ಹೇಳಿದರು.

ಕಲ್ಲಿದ್ದಲು ಮತ್ತು ಗಣಿ ಸಚಿವಾಲಯದ ಅಡಿಯಲ್ಲಿ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳ (ಸಿಪಿಎಸ್‌ಇ) ಅಧಿಕೃತವಲ್ಲದ ನಿರ್ದೇಶಕರ (ಎನ್‌ಒಡಿ) ಮೊದಲ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯಕ್ಷಮತೆಯನ್ನು ಇನ್ನಷ್ಟು ಸುಧಾರಿಸಲು ಎನ್‌ಒಡಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರಗಳು ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಕ್ಷೇತ್ರಗಳಾಗಿವೆ ಎಂದು ಅವರು ಹೇಳಿದರು. ಪ್ರಸ್ತುತ ಸರ್ಕಾರವು ರಾಷ್ಟ್ರ ನಿರ್ಮಾಣದಲ್ಲಿ ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರಗಳ ಅತ್ಯುತ್ತಮ ಬಳಕೆಯನ್ನು ಗಮನಿಸುತ್ತಿದೆ ಎಂದು ಶ್ರೀ ಜೋಶಿ ಹೇಳಿದರು. ಹೆಚ್ಚಿನ ಉತ್ಪಾದನಾ ಗುರಿಗಳನ್ನು ಸಾಧಿಸಲು ಕ್ಷೇತ್ರಗಳು ಪರಿವರ್ತನೆಯ ಕ್ರಮದಲ್ಲಿವೆ ಎಂದು ಅವರು ಹೇಳಿದರು.

ಕಲ್ಲಿದ್ದಲು, ಗಣಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ ರಾವ್ಸಾಹೇಬ್ ಪಾಟೀಲ್ ದಾನ್ವೆ, ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಡಾ. ಅನಿಲ್ ಕುಮಾರ್ ಜೈನ್, ಕಲ್ಲಿದ್ದಲು ಮತ್ತು ಗಣಿ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಮತ್ತು ಅಂಗಸಂಸ್ಥೆಗಳ ಎನ್ಒಡಿಗಳು ಅಭಿಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

*******

 

 

 


(Release ID: 1840954) Visitor Counter : 170