ಪ್ರಧಾನ ಮಂತ್ರಿಯವರ ಕಛೇರಿ
ಸಿಂಗಾಪುರ ಓಪನ್ ಪ್ರಶಸ್ತಿಯನ್ನು ಮೊದಲ ಬಾರಿಗೆ ಗೆದ್ದ ಪಿ.ವಿ.ಸಿಂಧು ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
17 JUL 2022 2:23PM by PIB Bengaluru
ಪಿ.ವಿ.ಸಿಂಧು ಅವರು ಮೊದಲ ಬಾರಿಗೆ ಸಿಂಗಾಪುರ್ ಓಪನ್ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದನೆ ಸಲ್ಲಿಸಿದ್ದಾರೆ. ಇದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಮುಂಬರುವ ಆಟಗಾರರಿಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು : "ಮೊದಲ ಬಾರಿಗೆ ಸಿಂಗಾಪುರ ಓಪನ್ ಪ್ರಶಸ್ತಿ ಗೆದ್ದ @Pvsindhu1 ಅವರನ್ನು ನಾನು ಅಭಿನಂದಿಸುತ್ತೇನೆ. ಅವರು ಮತ್ತೊಮ್ಮೆ ತಮ್ಮ ಅಸಾಧಾರಣ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಮತ್ತು ಯಶಸ್ಸನ್ನು ಸಾಧಿಸಿದ್ದಾರೆ. ಇದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಮುಂಬರುವ ಆಟಗಾರರಿಗೆ ಸ್ಫೂರ್ತಿ ನೀಡುತ್ತದೆ" ಎಂದು ಹೇಳಿದ್ದಾರೆ.
***************
(रिलीज़ आईडी: 1842374)
आगंतुक पटल : 153
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam