ವಾರ್ತಾ ಮತ್ತು ಪ್ರಸಾರ ಸಚಿವಾಲಯ
azadi ka amrit mahotsav

2021-22ರಲ್ಲಿ ಭಾರತದ ವಿರುದ್ಧ ಕೆಲಸ ಮಾಡುತ್ತಿರುವ 747 ವೆಬ್‌ಸೈಟ್‌ಗಳು, 94 ಯೂಟ್ಯೂಬ್‌ ಚಾನೆಲ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಕೇಂದ್ರ ಸಚಿವ ಶ್ರೀ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

Posted On: 21 JUL 2022 4:14PM by PIB Bengaluru

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್‌ ಠಾಕೂರ್‌ ಅವರು 2021-22 ರಲ್ಲಿ ಸಚಿವಾಲಯವು ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಯೂಟ್ಯೂಬ್‌ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಹೇಳಿದರು. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶ್ರೀ ಠಾಕೂರ್‌, ಸಚಿವಾಲಯವು 94 ಯೂಟ್ಯೂಬ್‌ ಚಾನೆಲ್‌ಗಳು, 19 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು 747 ಯುಆರ್‌ಎಲ್‌ಗಳ ವಿರುದ್ಧ ಕ್ರಮ ಕೈಗೊಂಡಿದೆ ಮತ್ತು ಅವುಗಳನ್ನು ನಿರ್ಬಂಧಿಸಿದೆ ಎಂದು ಹೇಳಿದರು. ಸೆಕ್ಷ ನ್‌ 69 ಎ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಅಡಿಯಲ್ಲಿಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

 

ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಮತ್ತು ಅಂತರ್ಜಾಲದಲ್ಲಿ ಪ್ರಚಾರವನ್ನು ಹರಡುವ ಮೂಲಕ ದೇಶದ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ಕೆಲಸ ಮಾಡುವ ಏಜೆನ್ಸಿಗಳ ವಿರುದ್ಧ ಸರ್ಕಾರ ಬಲವಾಗಿ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದರು.

 

 

************


(Release ID: 1843598) Visitor Counter : 243