ಪ್ರಧಾನ ಮಂತ್ರಿಯವರ ಕಛೇರಿ

ʻಹರ್ ಘರ್ ತಿರಂಗಾʼ ಆಂದೋಲನಕ್ಕೆ ಹೆಚ್ಚು ಬೆಂಬಲ ನೀಡುವಂತೆ ಜನತೆಗೆ ಮನವಿ ಮಾಡಿದ ಪ್ರಧಾನಿ


 ಸ್ವತಂತ್ರ ಭಾರತಕ್ಕಾಗಿ ಧ್ವಜದ ಕನಸು ಕಂಡವರ ಸ್ಮರಣೀಯ ಧೈರ್ಯ ಮತ್ತು ಪ್ರಯತ್ನಗಳನ್ನು ಸ್ಮರಿಸಿದ ಪ್ರಧಾನಿ


 ಜುಲೈ 22 ನಮ್ಮ ಇತಿಹಾಸದಲ್ಲಿ ವಿಶೇಷ ಪ್ರಸ್ತುತತೆಯನ್ನು ಹೊಂದಿದೆ, ಏಕೆಂದರೆ 1947 ರ ಈ ದಿನದಂದು ನಮ್ಮ ರಾಷ್ಟ್ರಧ್ವಜವನ್ನು ಅಂಗೀಕರಿಸಲಾಯಿತು: ಪ್ರಧಾನಮಂತ್ರಿ

Posted On: 22 JUL 2022 9:31AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ʻಹರ್ ಘರ್ ತಿರಂಗಾʼ ಆಂದೋಲನಕ್ಕೆ ಹೆಚ್ಚು ಬೆಂಬಲ ನೀಡುವಂತೆ ಜನತೆಗೆ ಮನವಿ ಮಾಡಿದ್ದಾರೆ. ಸ್ವತಂತ್ರ ಭಾರತಕ್ಕಾಗಿ ಧ್ವಜದ ಕನಸು ಕಂಡವರ ಸ್ಮರಣೀಯ ಧೈರ್ಯ ಮತ್ತು ಪ್ರಯತ್ನಗಳನ್ನು ಶ್ರೀ ಮೋದಿ ಸ್ಮರಿಸಿದ್ದಾರೆ. ನಮ್ಮ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಸಮಿತಿಯ ವಿವರಗಳು ಮತ್ತು ಪಂಡಿತ್ ನೆಹರು ಹಾರಿಸಿದ ಮೊದಲ ತ್ರಿವರ್ಣ ಧ್ವಜದ ವಿವರಗಳು ಸೇರಿದಂತೆ ಇತಿಹಾಸದ ಕೆಲವು ಆಸಕ್ತಿದಾಯಕ ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಜುಲೈ 22 ನಮ್ಮ ಇತಿಹಾಸದಲ್ಲಿ ವಿಶೇಷ ಪ್ರಸ್ತುತತೆಯನ್ನು ಹೊಂದಿದೆ, ಏಕೆಂದರೆ 1947ರಲ್ಲಿ ಈ ದಿನದಂದೇ ನಮ್ಮ ರಾಷ್ಟ್ರಧ್ವಜವನ್ನು ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು,
"ಈ ವರ್ಷ, ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ, ನಾವು ʻಹರ್ ಘರ್ ತಿರಂಗಾʼ ಆಂದೋಲನವನ್ನು ಬಲಪಡಿಸೋಣ. ಆಗಸ್ಟ್ 13 ಮತ್ತು 15ರ ನಡುವೆ ತ್ರಿವರ್ಣ ಧ್ವಜವನ್ನು ಹಾರಿಸಿ ಅಥವಾ ನಿಮ್ಮ ಮನೆಗಳಲ್ಲಿ ಪ್ರದರ್ಶಿಸಿ. ಈ ಆಂದೋಲನವು ರಾಷ್ಟ್ರಧ್ವಜದೊಂದಿಗಿನ ನಮ್ಮ ನಂಟನ್ನು ನಿಕಟವಾಗಿಸುತ್ತದೆ," ಎಂದು ಹೇಳಿದ್ದಾರೆ.
"ಇಂದು, ಜುಲೈ 22 ನಮ್ಮ ಇತಿಹಾಸದಲ್ಲಿ ವಿಶೇಷ ಪ್ರಸ್ತುತತೆಯನ್ನು ಹೊಂದಿದೆ. 1947ರ ಇದೇ ದಿನದಂದು ನಮ್ಮ ರಾಷ್ಟ್ರಧ್ವಜವನ್ನು ಅಂಗೀಕರಿಸಲಾಯಿತು. ನಮ್ಮ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಸಮಿತಿಯ ವಿವರಗಳು ಮತ್ತು ಪಂಡಿತ್ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜದ ವಿವರಗಳು ಸೇರಿದಂತೆ ಇತಿಹಾಸದ ಕೆಲವು ಆಸಕ್ತಿದಾಯಕ ತುಣುಕುಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.”
"ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಸ್ವತಂತ್ರ ಭಾರತಕ್ಕಾಗಿ ಧ್ವಜದ ಕನಸು ಕಂಡ ಎಲ್ಲರ ಸ್ಮರಣೀಯ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನಾವು ಸ್ಮರಿಸುತ್ತಿದ್ದೇವೆ. ಅವರ ದೂರದೃಷ್ಟಿಯನ್ನು ಈಡೇರಿಸುವ ಮತ್ತು ಅವರ ಕನಸಿನ ಭಾರತವನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ,ʼʼ ಎಂದಿದ್ದಾರೆ.

 

 

 

***********



(Release ID: 1843790) Visitor Counter : 141