ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವ ಚಾಂಪಿಯನ್‌ಶಿಪ್ನ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಿ
Posted On:
24 JUL 2022 9:51AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಚಾಂಪಿಯನ್ ಶಿಪ್ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.
ಭಾರತೀಯ ಕ್ರೀಡಾ ಪ್ರಾಧಿಕಾರದ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು, ಹೀಗೆ ಟ್ವೀಟ್ ಮಾಡಿದ್ದಾರೆ.
"ನಮ್ಮ ಅತ್ಯಂತ ಖ್ಯಾತ ಅಥ್ಲೀಟ್‌ನ ದೊಡ್ಡ ಸಾಧನೆ!
ವಿಶ್ವ ಚಾಂಪಿಯನ್‌ಶಿಪ್‌ನ#WorldChampionships ಜಾವೆಲಿನ್ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ @Neeraj_chopra1 ಅವರಿಗೆ ಅಭಿನಂದನೆಗಳು. ಇದು ಭಾರತೀಯ ಕ್ರೀಡೆಗಳಿಗೆ ವಿಶೇಷ ಕ್ಷಣವಾಗಿದೆ. ನೀರಜ್ ಅವರ ಮುಂಬರುವ ಪ್ರಯತ್ನಗಳಿಗಾಗಿ ಅವರಿಗೆ ಶುಭ ಹಾರೈಕೆಗಳು.”
***************
(Release ID: 1844378)
Visitor Counter : 140
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam