ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2022ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು.

Posted On: 30 JUL 2022 11:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರನ್ನು ಅಭಿನಂದಿಸಿದ್ದಾರೆ.

 

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,

 

"ಅಸಾಧಾರಣ @mirabai_chanu ಭಾರತ ಮತ್ತೊಮ್ಮೆ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಬರ್ಮಿಂಗ್ ಹ್ಯಾಮ್ ಕ್ರೀಡಾಕೂಟದಲ್ಲಿ ಅವರು ಚಿನ್ನ ಗೆದ್ದು ಹೊಸ ಕಾಮನ್ ವೆಲ್ತ್ ದಾಖಲೆಯನ್ನು ಸ್ಥಾಪಿಸಿದ್ದಾರೆ ಎಂದು ಪ್ರತಿಯೊಬ್ಬ ಭಾರತೀಯನೂ ಸಂತೋಷಪಡುತ್ತಾನೆ. ಅವರ ಯಶಸ್ಸು ಹಲವಾರು ಭಾರತೀಯರಿಗೆ, ವಿಶೇಷವಾಗಿ ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ.''

 

 

*********


(Release ID: 1846742) Visitor Counter : 167