ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಧ್ಯಪ್ರದೇಶದ ಜಬಲ್ಪುರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಿಂದಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ  

प्रविष्टि तिथि: 01 AUG 2022 8:36PM by PIB Bengaluru

ಮಧ್ಯಪ್ರದೇಶದ ಜಬಲ್ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,

"ಮಧ್ಯಪ್ರದೇಶದ ಜಬಲ್ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಉಂಟಾದ ಜೀವಹಾನಿಯಿಂದ ತಮಗೆ ವೇದನೆಯಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಬಾಧಿತರಿಗೆ ಸ್ಥಳೀಯ ಆಡಳಿತ ಎಲ್ಲಾ ರೀತಿಯ ನೆರವು ನೀಡಲಿದೆ” ಎಂದು ಹೇಳಿದ್ದಾರೆ.

 


 

*************


(रिलीज़ आईडी: 1847270) आगंतुक पटल : 160
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam