ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಶ್ಚಿಮ ಬಂಗಾಳದ ಸಿತಾಲ್ಕುಚಿಯಲ್ಲಿ ವ್ಯಾನ್ ಗೆ ವಿದ್ಯುತ್ ತಗುಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಸಂತ್ರಸ್ತರಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಧನ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 02 AUG 2022 5:34PM by PIB Bengaluru

ಪಶ್ಚಿಮ ಬಂಗಾಳದ ಸಿತಾಲ್ಕುಚಿಯಲ್ಲಿ ವ್ಯಾನ್ ಗೆ ವಿದ್ಯುತ್ ತಗುಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಸಂತ್ರಸ್ತರಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಿ ಕಾರ್ಯಾಲಯದ ಟ್ವೀಟ್ ನಲ್ಲಿ;

"ಪಶ್ಚಿಮ ಬಂಗಾಳದ ಸಿತಾಲ್ಕುಚಿಯಲ್ಲಿ ವ್ಯಾನ್ ಗೆ ವಿದ್ಯುತ್ ಸ್ಪರ್ಶಿಸಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ: ಪ್ರಧಾನಮಂತ್ರಿ"

"ಮೃತರ ಹತ್ತಿರದ ಬಂಧುಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ" ಎಂದು ತಿಳಿಸಲಾಗಿದೆ.

 

*********


(रिलीज़ आईडी: 1847607) आगंतुक पटल : 157
इस विज्ञप्ति को इन भाषाओं में पढ़ें: Malayalam , English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu