ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಾಮಾಜಿಕ ಮಾಧ್ಯಮ ಡಿಪಿಯನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸುವಂತೆ ನಾಗರಿಕರಿಗೆ ಪ್ರಧಾನಮಂತ್ರಿ ಮನವಿ

Posted On: 02 AUG 2022 10:19AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹರ್ ಘರ್ ತಿರಂಗಾವನ್ನು ಸಾಮೂಹಿಕ ಆಂದೋಲನವಾಗಿ ಮಾಡಲು ನಾಗರಿಕರು ತಮ್ಮ ಸಾಮಾಜಿಕ ಮಾಧ್ಯಮ ಡಿ.ಪಿ.ಗಳನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸುವಂತೆ ನಾಗರಿಕರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು:

"ಇಂದು ವಿಶೇಷ ಆಗಸ್ಟ್ 2 ! ನಾವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ, ನಮ್ಮ ದೇಶವು #HarGharTiranga ವನ್ನು ಆಚರಿಸಲು ಸಜ್ಜಾಗಿದೆ, ಇದು  ನಮ್ಮ ತ್ರಿವರ್ಣ ಧ್ವಜವನ್ನು ಆಚರಿಸುವ ಸಾಮೂಹಿಕ ಆಂದೋಲನವಾಗಿದೆ. ನಾನು ನನ್ನ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಡಿಪಿಯನ್ನು ಬದಲಾಯಿಸಿದ್ದೇನೆ ಮತ್ತು ಅದೇ ರೀತಿ ಮಾಡುವಂತೆ ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ" ಎಂದು ಹೇಳಿದ್ದಾರೆ.

 


 

*****************


(Release ID: 1847720) Visitor Counter : 139