ಪ್ರಧಾನ ಮಂತ್ರಿಯವರ ಕಛೇರಿ
ಬರ್ಮಿಂಗ್‌ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟ- 2022 ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಗುರುದೀಪ್ ಸಿಂಗ್ ಅವರಿಗೆ ಪ್ರಧಾನಿ ಅಭಿನಂದನೆ
प्रविष्टि तिथि:
04 AUG 2022 8:30AM by PIB Bengaluru
ಬರ್ಮಿಂಗ್‌ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟ-2022ರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುರುದೀಪ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;
"ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವವು ಅತ್ಯುತ್ತಮ ಫಲಿತಾಂಶಗಳಿಗೆ ಕಾರಣವಾಗುತ್ತದೆ. ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್‌ಲಿಫ್ಟಿಂಗ್ ಸ್ಪರ್ದೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಗುರುದೀಪ್ ಸಿಂಗ್ ಇದನ್ನು ತೋರಿಸಿದ್ದಾರೆ. ಅವರು ನಮ್ಮ ನಾಗರಿಕರಲ್ಲಿ ಆನಂದದ ಸ್ಫೂರ್ತಿ ಮತ್ತು ಚೈತನ್ಯ ಹೆಚ್ಚಿಸಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು" ಎಂದು ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದಾರೆ.
***********
(रिलीज़ आईडी: 1848362)
आगंतुक पटल : 216
इस विज्ञप्ति को इन भाषाओं में पढ़ें:
Bengali
,
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam