ಪ್ರಧಾನ ಮಂತ್ರಿಯವರ ಕಛೇರಿ

ಸಿಡಬ್ಲ್ಯೂಜಿ 2022 ರಲ್ಲಿ ಮಹಿಳೆಯರ 62 ಕೆಜಿ ವಿಭಾಗದ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ಸಾಕ್ಷಿ ಮಲಿಕ್‌ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು.

Posted On: 05 AUG 2022 11:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022ರ ಕಾಮನ್‌ವೆಲ್ತ್‌ ಕ್ರೀಡಾಕೂಟದ ಮಹಿಳೆಯರ 62 ಕೆ.ಜಿ ವಿಭಾಗದ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ಸಾಕ್ಷಿ ಮಲಿಕ್‌ ಅವರನ್ನು ಅಭಿನಂದಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಟ್ವೀಟ್‌ ಮಾಡಿದ್ದಾರೆ;

‘‘ಸಿಡಬ್ಲ್ಯೂಜಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಮ್ಮ ಕ್ರೀಡಾಪಟುಗಳು ನಮಗೆ ಹೆಮ್ಮೆ ತರುತ್ತಿದ್ದಾರೆ. ಸಾಕ್ಷಿ ಮಲಿಕ್‌ ಅವರ ಅತ್ಯುತ್ತಮ ಕ್ರೀಡಾ ಪ್ರದರ್ಶನದಿಂದ ರೋಮಾಂಚನಗೊಂಡಿದ್ದೇನೆ. ಪ್ರತಿಷ್ಠಿತ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅವರು ಪ್ರತಿಭೆಯ ಶಕ್ತಿ ಕೇಂದ್ರವಾಗಿದ್ದಾರೆ ಮತ್ತು ಗಮನಾರ್ಹ ಸ್ಥಿತಿಸ್ಥಾಪಕತ್ವದಿಂದ ಆಶೀರ್ವದಿಸಲ್ಪಟ್ಟಿದ್ದಾರೆ,’’ ಎಂದು ಹೇಳಿದ್ದಾರೆ.

***********



(Release ID: 1849146) Visitor Counter : 112