ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಾ ಟೇಬಲ್ ಟೆನಿಸ್ ನಲ್ಲಿ ಕಂಚಿನ ಪದಕ ಗೆದ್ದ ಸೋನಲ್ ಪಟೇಲ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ
Posted On:
07 AUG 2022 8:38AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿಡಬ್ಲೂಜಿ ಕ್ರೀಡಾಕೂಟ 2022ದ ಪ್ಯಾರಾ ಟೇಬಲ್ ಟೆನಿಸ್ ನಲ್ಲಿ ಕಂಚಿನ ಪದಕವನ್ನು ಜಯಿಸಿದ್ದಕ್ಕಾಗಿ ಸೋನಲ್ ಪಟೇಲ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಪ್ರತಿಭೆ, ಮನೋಭಾವ ಮತ್ತು ದೃಢತೆ ಒಗ್ಗೂಡಿದಾಗ ಯಾವುದೂ ಅಸಾಧ್ಯವಲ್ಲ. ಸೋನಾಲ್ ಪಟೇಲ್ ಪ್ಯಾರಾ ಟೇಬಲ್ ಟೆನಿಸ್‌ನಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಅಕ್ಷರಶಃ ತಮ್ಮ ಅತ್ಯುತ್ಸಾಹ ಪ್ರದರ್ಶಿಸಿದ್ದಾರೆ. ಅವರಿಗೆ ಅಭಿನಂದನೆಗಳು. ಮುಂಬರುವ ದಿನಗಳಲ್ಲಿ ಅವರು ತನ್ನನ್ನು ತಾನು ಭಿನ್ನವಾಗಿ ಗುರುತಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ. # Cheer4India’’.
****
(Release ID: 1849500)
Visitor Counter : 109
Read this release in:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam