ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದಲ್ಲಿ ಭೀಕರ ಅಪಘಾತ; ಪ್ರಾಣಹಾನಿಗೆ ಪ್ರಧಾನಿ ದುಃಖ
ಮೃತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಧನ ಘೋಷಣೆ
प्रविष्टि तिथि:
09 AUG 2022 10:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾಗಿರುವ ಪ್ರಾಣಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಧನ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ;
"ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾಗಿರುವ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಧನ ನೀಡಲಾಗುವುದು: ಪ್ರಧಾನ ಮಂತ್ರಿ ಪ್ರಕಟ.
*************
(रिलीज़ आईडी: 1850434)
आगंतुक पटल : 157
इस विज्ञप्ति को इन भाषाओं में पढ़ें:
English
,
Urdu
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam