ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಜಗದೀಪ್ ಧನ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 11 AUG 2022 2:12PM by PIB Bengaluru

ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಜಗದೀಪ್ ಧನ್ಕರ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,

"ಶ್ರೀ ಜಗದೀಪ್ ಧನ್ಕರ್ ಜೀ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದೆ. ಭಾರತದ ಉಪರಾಷ್ಟ್ರಪತಿಯಾಗಿರುವ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಮತ್ತು ಅವರ ಅಧಿಕಾರದ ಅವಧಿ ಫಲಪ್ರದವಾಗಿರಲಿ ಎಂದು ಶುಭ ಹಾರೈಸುತ್ತೇನೆ. @ಜೆಧನ್ಕರ್ 1 @ಉಪರಾಷ್ಟ್ರಪತಿಸಚಿವಾಲಯ” ಎಂದು ಹೇಳಿದ್ದಾರೆ.

 

 

************


(ಪ್ರಕಟಣೆ ಐ.ಡಿ.: 1850911) ವಿಸಿಟರ್ ಕೌಂಟರ್ : 165