ಪ್ರಧಾನ ಮಂತ್ರಿಯವರ ಕಛೇರಿ
ಮಹಿಳೆಯರ 60 ಕೆಜಿ ಬಾಕ್ಸಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಜೈಸ್ಮಿನ್ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
प्रविष्टि तिथि:
06 AUG 2022 10:06PM by PIB Bengaluru
ಬರ್ಮಿಂಗ್ಹ್ಯಾಮ್ ಸಿಡಬ್ಲ್ಯೂಜಿ 2022 ರಲ್ಲಿ ಮಹಿಳೆಯರ 60 ಕೆಜಿ ಬಾಕ್ಸಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಜೈಸ್ಮಿನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು:
"ಸಿಡಬ್ಲ್ಯುಜಿಯಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಬಾಕ್ಸಿಂಗ್ ನಲ್ಲಿ ಜೈಸ್ಮಿನ್ ಲಂಬೋರಿಯಾ ಕಂಚಿನ ಪದಕ ಗೆದ್ದಿರುವುದು ಸಂತಸ ತಂದಿದೆ. ಅವರ ಕ್ರೀಡಾ ಯಶಸ್ಸು ಭಾರತೀಯ ಬಾಕ್ಸಿಂಗ್ ನ ಭವಿಷ್ಯಕ್ಕೆ ಶುಭಸೂಚಕವಾಗಿದೆ. ಮುಂಬರುವ ವರ್ಷಗಳಲ್ಲಿ ಅವರು ವೈಭವದ ಪಥದಲ್ಲಿ ಸಾಗುತ್ತಲೇ ಇರಲಿ. #Cheer4India" ಎಂದು ಹಾರೈಸಿದ್ದಾರೆ.
***************
(रिलीज़ आईडी: 1850933)
आगंतुक पटल : 144
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam