ಪ್ರಧಾನ ಮಂತ್ರಿಯವರ ಕಛೇರಿ

ವಿಶ್ವ ಆನೆ ದಿನದಂದು ಆನೆ ಸಂರಕ್ಷಕರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಕಳೆದ 8 ವರ್ಷಗಳಲ್ಲಿ ಆನೆಗಳ ಮೀಸಲು ಪ್ರದೇಶಗಳ ಸಂಖ್ಯೆ ಹೆಚ್ಚಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

Posted On: 12 AUG 2022 11:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಆನೆ ದಿನದ ಸಂದರ್ಭದಲ್ಲಿ ಆನೆ ಸಂರಕ್ಷಕರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಕಳೆದ 8 ವರ್ಷಗಳಲ್ಲಿ ಆನೆಗಳ ಮೀಸಲು ಪ್ರದೇಶಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದರು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು, "#WorldElephantDay ರಂದು, ಆನೆಯನ್ನು ರಕ್ಷಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇನೆ. ಏಷ್ಯಾದ ಎಲ್ಲಾ ಆನೆಗಳಲ್ಲಿ ಭಾರತವು ಸುಮಾರು ಶೇ. 60 ರಷ್ಟು ಆನೆಗಳನ್ನು ಹೊಂದಿದೆ ಎಂದು ತಿಳಿದರೆ ನಿಮಗೆ ಸಂತೋಷವಾಗುತ್ತದೆ. ಕಳೆದ 8 ವರ್ಷಗಳಲ್ಲಿ ಆನೆಗಳ ಮೀಸಲು ಪ್ರದೇಶಗಳ ಸಂಖ್ಯೆ ಹೆಚ್ಚಾಗಿದೆ. ಆನೆಗಳನ್ನು ರಕ್ಷಿಸುವಲ್ಲಿ ತೊಡಗಿರುವ ಎಲ್ಲರನ್ನೂ ನಾನು ಶ್ಲಾಘಿಸುತ್ತೇನೆ," ಎಂದು ಹೇಳಿದರು.

" ಆನೆ ಸಂರಕ್ಷಣೆಯಲ್ಲಿನ ಯಶಸ್ಸನ್ನು ಮಾನವ-ಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡಲು ಭಾರತದಲ್ಲಿ ನಡೆಯುತ್ತಿರುವ ದೊಡ್ಡ ಪ್ರಯತ್ನಗಳ ಹಿನ್ನೆಲೆಯಲ್ಲಿ ಮತ್ತು ಸ್ಥಳೀಯ ಸಮುದಾಯಗಳನ್ನು ಮತ್ತು ಪರಿಸರ ಪ್ರಜ್ಞೆಯನ್ನು ಹೆಚ್ಚಿಸುವಲ್ಲಿ ಅವರ ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಸಂಯೋಜಿಸುವ ಸಂದರ್ಭದಲ್ಲಿ ನೋಡಬೇಕು," ಎಂದಿದ್ದಾರೆ.

 

 

*********



(Release ID: 1851192) Visitor Counter : 152