ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕನ್ನಡದ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 12 AUG 2022 2:21PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕನ್ನಡದ ಹೆಸರಾಂತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.


ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ  “ಅದ್ವಿತೀಯ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತ ಪ್ರೀತಿಸುವವರ  ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’’ ಎಂದು ಹೇಳಿದ್ದಾರೆ. 

 

********


(ಪ್ರಕಟಣೆ ಐ.ಡಿ.: 1851246) ವಿಸಿಟರ್ ಕೌಂಟರ್ : 184