ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

76ನೇ ಸ್ವಾತಂತ್ರ್ಯ ದಿನಾಚರಣೆಗೆ ಜನತೆಗೆ ಶುಭ ಕೋರಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ


ಇದು ಭಾರತದ ಸಂಸ್ಕೃತಿ, ಸಕ್ರಿಯ ಪ್ರಜಾಪ್ರಭುತ್ವ ಪರಂಪರೆ ಮತ್ತು ಕಳೆದ 75 ವರ್ಷಗಳ ಸಾಧನೆಗಳ ಬಗ್ಗೆ ಹೆಮ್ಮೆ ಪಡುವ ದಿನ


ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ವೀರ ಯೋಧರಿಗೆ ನಾನು ನಮನ ಸಲ್ಲಿಸುತ್ತೇನೆ


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಹಿತಾಸಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ನಮ್ಮ ವೀರ ಸ್ವಾತಂತ್ರ್ಯ ಹೋರಾಟಗಾರರ ಸುದೃಢ ಮತ್ತು ಸ್ವಾವಲಂಬಿ ಭಾರತ ಕನಸನ್ನು ಸಾಕಾರಗೊಳಿಸುತ್ತಿದ್ದಾರೆ


ಸ್ವಾತಂತ್ರೋತ್ಸವದ ಶತಮಾನೋತ್ಸದ ವೇಳೆಗೆ ಭಾರತವನ್ನು ಮತ್ತೊಮ್ಮೆ ‘ವಿಶ್ವಗುರು’ ಮಾಡಲು ಕಠಿಣ ಪರಿಶ್ರಮದ ಮೂಲಕ ಈ ನಿರಂತರ ಅಭಿವೃದ್ಧಿ ಪಯಣಕ್ಕೆ ಕೊಡುಗೆ ನೀಡುವಂತೆ ಆಜಾದಿ ಕಾ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ನಾನು ಪ್ರತಿಯೊಬ್ಬರಲ್ಲೂ ಮನವಿ ಮಾಡುತ್ತೇನೆ

Posted On: 15 AUG 2022 11:36AM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಶ್ರೀ ಅಮಿತ್ ಶಾ ಅವರು ತಮ್ಮ ಟ್ವೀಟ್‌ಗಳಲ್ಲಿ, ಇದು ಭಾರತದ ಸಂಸ್ಕೃತಿ, ಸಕ್ರಿಯ ಪ್ರಜಾಪ್ರಭುತ್ವದ ಪರಂಪರೆ ಮತ್ತು ಕಳೆದ 75 ವರ್ಷಗಳ ಸಾಧನೆಗಳ ಬಗ್ಗೆ ಹೆಮ್ಮೆಪಡುವ ದಿನ ಇದಾಗಿದೆ ಎಂದು ಹೇಳಿದ್ದಾರೆ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ನಮ್ಮ ವೀರ ಸೈನಿಕರಿಗೆ ನಾನು ನಮನಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಹಿತಾಸಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ನಮ್ಮ ವೀರ ಸ್ವಾತಂತ್ರ್ಯ ಹೋರಾಟಗಾರರ ಸಿದೃಢ ಮತ್ತು ಸ್ವಾವಲಂಬಿ ಭಾರತ ಕನಸನ್ನು ಸಾಕಾರಗೊಳಿಸುತ್ತಿದ್ದಾರೆ. ಸ್ವಾತಂತ್ರೋತ್ಸವದ ಶತಮಾನೋತ್ಸದ ವೇಳೆಗೆ ಭಾರತವನ್ನು ಮತ್ತೊಮ್ಮೆ ‘ವಿಶ್ವಗುರು’ ಮಾಡಲು ಕಠಿಣ ಪರಿಶ್ರಮದ ಮೂಲಕ ಈ ನಿರಂತರ ಅಭಿವೃದ್ಧಿ ಪಯಣಕ್ಕೆ ಕೊಡುಗೆ ನೀಡುವಂತೆ ಆಜಾದಿ ಕಾ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಪ್ರತಿಯೊಬ್ಬರಲ್ಲೂ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

*******


(Release ID: 1852100) Visitor Counter : 217