ಗೃಹ ವ್ಯವಹಾರಗಳ ಸಚಿವಾಲಯ
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಹೊಸದಿಲ್ಲಿಯ 'ಸದೈವ ಅಟಲ್' ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.
ಪೂಜ್ಯ ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ ಜೀವನದ ಪ್ರತಿಯೊಂದು ಕ್ಷಣವನ್ನು ಭಾರತ ಮಾತೆಯ ವೈಭವವನ್ನು ಮರುಸ್ಥಾಪಿಸಲು ವಿನಿಯೋಗಿಸಿದರು
ಅವರು ಭಾರತೀಯ ರಾಜಕೀಯದಲ್ಲಿ ಬಡವರ ಕಲ್ಯಾಣ ಮತ್ತು ಉತ್ತಮ ಆಡಳಿತದ ಹೊಸ ಶಕೆಯನ್ನು ಪ್ರಾರಂಭಿಸಿದರು ಮತ್ತು ಅದೇ ಸಮಯದಲ್ಲಿ ಭಾರತದ ಧೈರ್ಯ ಮತ್ತು ಶಕ್ತಿಯನ್ನು ಜಗತ್ತಿಗೆ ಮನವರಿಕೆ ಮಾಡಿಕೊಟ್ಟರು, ಇಂದು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು
Posted On:
16 AUG 2022 1:11PM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಹೊಸದಿಲ್ಲಿಯ 'ಸದೈವ ಅಟಲ್' ಸ್ಮಾರಕಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದರು.
ಪೂಜ್ಯ ಅಟಲ್ ಜೀ ಅವರು ತಮ್ಮ ಜೀವನದ ಪ್ರತಿಯೊಂದು ಕ್ಷಣವನ್ನೂ ಭಾರತ ಮಾತೆಯ ವೈಭವವನ್ನು ಮರುಸ್ಥಾಪಿಸಲು ವಿನಿಯೋಗಿಸಿದರು ಎಂದು ಶ್ರೀ ಅಮಿತ್ ಶಾ ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ. ಅವರು ಭಾರತೀಯ ರಾಜಕೀಯದಲ್ಲಿ ಬಡವರ ಕಲ್ಯಾಣ ಮತ್ತು ಉತ್ತಮ ಆಡಳಿತದ ಹೊಸ ಶಕೆಯನ್ನು ಪ್ರಾರಂಭಿಸಿದರು ಮತ್ತು ಅದೇ ಸಮಯದಲ್ಲಿ ಭಾರತದ ಧೈರ್ಯ ಮತ್ತು ಶಕ್ತಿಯನ್ನು ಜಗತ್ತಿಗೆ ಮನವರಿಕೆ ಮಾಡಿಕೊಟ್ಟರು. ಇಂದು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು.ಎಂದೂ ಶ್ರೀ ಅಮಿತ್ ಶಾ ಹೇಳಿದ್ದಾರೆ.
***********
(Release ID: 1852274)
Visitor Counter : 180