ಪ್ರಧಾನ ಮಂತ್ರಿಯವರ ಕಛೇರಿ
ಕಾಮನ್ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಲಾನ್ ಬೌಲ್ಸ್ ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಕ್ಕಾಗಿ ಲವ್ಲಿ ಚೌಬೆ, ಪಿಂಕಿ ಸಿಂಗ್, ನಯನ್ಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಅವರನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು
Posted On:
02 AUG 2022 8:03PM by PIB Bengaluru
ಬರ್ಮಿಂಗ್ ಹ್ಯಾಮ್ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಲಾನ್ ಬೌಲ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಲವ್ಲಿ ಚೌಬೆ, ಪಿಂಕಿ ಸಿಂಗ್, ನಯನ್ಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿರುವರು:
" ಬರ್ಮಿಂಗ್ ಹ್ಯಾಮ್ನಲ್ಲಿ ಐತಿಹಾಸಿಕ ಗೆಲುವು! ಲಾನ್ ಬೌಲ್ಗಳಲ್ಲಿ ಪ್ರತಿಷ್ಠಿತ ಚಿನ್ನವನ್ನು ದೇಶಕ್ಕೆ ತಂದಿದ್ದಕ್ಕಾಗಿ ಲವ್ಲಿ ಚೌಬೆ, ಪಿಂಕಿ ಸಿಂಗ್, ನಯನ್ಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಅವರ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ತಂಡವು ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿದೆ ಮತ್ತು ಅವರ ಯಶಸ್ಸು ಲಾನ್ ಬೌಲ್ಸ್ ಕ್ರೀಡೆಯತ್ತ ಅನೇಕ ಭಾರತೀಯರನ್ನು ಪ್ರೇರೇಪಿಸುತ್ತದೆ."
*********
(Release ID: 1852472)
Visitor Counter : 121
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam