ಪ್ರಧಾನ ಮಂತ್ರಿಯವರ ಕಛೇರಿ

ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ

Posted On: 19 AUG 2022 11:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಪಾಲಿಯ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಯವರು " ರಾಜಸ್ಥಾನದ ಪಾಲಿಯಲ್ಲಿ ನಡೆದ ಅಪಘಾತ ತೀವ್ರ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ರಾಜಸ್ಥಾನದ ಪಾಲಿಯಲ್ಲಿ ನಡೆದ ಅಪಘಾತ ತೀವ್ರ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ

— ಪಿಎಂಒ ಇಂಡಿಯಾ (@PMOIndia) ಆಗಸ್ಟ್ 19, 2022

*******

 



(Release ID: 1853320) Visitor Counter : 125