ಗೃಹ ವ್ಯವಹಾರಗಳ ಸಚಿವಾಲಯ

ಪದ್ಮ ಪ್ರಶಸ್ತಿ-2023ಕ್ಕೆ 2022ರ ಸೆಪ್ಟೆಂಬರ್ 15 ರವರೆಗೆ ನಾಮನಿರ್ದೇಶನಕ್ಕೆ ಅವಕಾಶ

Posted On: 22 AUG 2022 12:29PM by PIB Bengaluru

    2023ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿ-2023ಕ್ಕೆ ಆನ್ಲೈನ್ ಮೂಲಕ ನಾಮನಿರ್ದೇಶನಗಳು / ಶಿಫಾರಸುಗಳನ್ನು ಮಾಡಲು 1  ಮೇ 2022ರಿಂದ ಅವಕಾಶ ಕಲ್ಪಿಸಲಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ ಸೆಪ್ಟೆಂಬರ್ 15, 2022. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ಆನ್ ಲೈನ್ ನಲ್ಲಿ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ (https://awards.gov.in) ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.


          ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ  ಮೂರು ಪದ್ಮ ಪ್ರಶಸ್ತಿಗಳು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವಾಣಿಜ್ಯ ಮತ್ತು ಕೈಗಾರಿಕೆ ಮುಂತಾದ ಎಲ್ಲ ಕ್ಷೇತ್ರಗಳು / ವಿಭಾಗಗಳಲ್ಲಿನ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಗಳಿಗಾಗಿ ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗ ಭೇದವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ, ಪಿಎಸ್ ಯುಗಳಲ್ಲಿ ಕೆಲಸ ಮಾಡುವವರೂ ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಾಗುವುದಿಲ್ಲ.


         ಪದ್ಮ ಪ್ರಶಸ್ತಿಗಳನ್ನು "ಜನರ ಪದ್ಮ" ವಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ಅರ್ಹ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಲಾಗುತ್ತಿದೆ.


          ನಾಮನಿರ್ದೇಶನಗಳು/ಶಿಫಾರಸುಗಳು ಮೇಲಿನ ಪೋರ್ಟಲ್ ನಲ್ಲಿ ಲಭ್ಯವಿರುವ ನಮೂನೆಯಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು, ನಿರೂಪಣಾ ಸ್ವರೂಪದಲ್ಲಿ (ಗರಿಷ್ಠ 800 ಪದಗಳು) ಉಲ್ಲೇಖವನ್ನು ಒಳಗೊಂಡಿರಬೇಕು, ಆಯಾ ಕ್ಷೇತ್ರ / ಶಿಸ್ತಿನಲ್ಲಿ ಶಿಫಾರಸು ಮಾಡಿದ ವ್ಯಕ್ತಿಯ ಆತ / ಆಕೆಯ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಯನ್ನು ಸ್ಪಷ್ಟವಾಗಿ ಹೊರತರುವಂತಿರಬೇಕು.


ಗೃಹ ವ್ಯವಹಾರಗಳ ಸಚಿವಾಲಯದ (https://mha.gov.in) ವೆಬ್ ಸೈಟ್ ನಲ್ಲಿ ಮತ್ತು ಪದ್ಮ ಪ್ರಶಸ್ತಿ ಪೋರ್ಟಲ್ ನಲ್ಲಿ (https://padmaawards.gov.in) 'ಪ್ರಶಸ್ತಿಗಳು ಮತ್ತು ಪದಕಗಳು' ಎಂಬ ಶೀರ್ಷಿಕೆಯಡಿ ಈ ಸಂಬಂಧದ ಹೆಚ್ಚಿನ ವಿವರಗಳು ಲಭ್ಯವಿವೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ನಿಯಮಗಳು ಮತ್ತು ಶಾಸನಗಳು https://padmaawards.gov.in/AboutAwards.aspx  ಸಂಪರ್ಕದೊಂದಿಗೆ ವೆಬ್ ಸೈಟ್ ನಲ್ಲಿ ಲಭ್ಯವಿದೆ.

 

***********



(Release ID: 1853582) Visitor Counter : 222