ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸೆಪ್ಟೆಂಬರ್ 1-2ರಂದು ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ


ಮೊದಲ ಸ್ವದೇಶಿ ವಿಮಾನ ವಾಹಕ ನೌಕೆ ಆಗಿ ಐ.ಎನ್.ಎಸ್. ವಿಕ್ರಾಂತ್ ಅನ್ನು ನಿಯೋಜಿಸಲಿರುವ ಪ್ರಧಾನಮಂತ್ರಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆಯ ಪ್ರಕಾಶಮಾನವಾದ ದಾರಿದೀಪವಾಗಿರುವ ವಿಕ್ರಾಂತ್ ಅನ್ನು ಭಾರತದ ಪ್ರಮುಖ ಕೈಗಾರಿಕಾ ಸಂಸ್ಥೆಗಳು ಮತ್ತು 100 ಕ್ಕೂ ಹೆಚ್ಚು ಎಂಎಸ್ಎಂಇಗಳು ಪೂರೈಸುವ ದೇಶೀಯ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಬಳಸಿಕೊಂಡು ತಯಾರಿಸಲಾಗಿದೆ

ಇದು ಭಾರತದ ಸಾಗರ ಇತಿಹಾಸದಲ್ಲಿ ಇದುವರೆಗೆ ನಿರ್ಮಿಸಲಾದ ಅತಿದೊಡ್ಡ ಹಡಗು ಮತ್ತು ಅತ್ಯಾಧುನಿಕ ಆಟೋಮೇಷನ್ ವೈಶಿಷ್ಟ್ಯಗಳನ್ನು ಹೊಂದಿದೆ

ವಸಾಹತುಶಾಹಿ ಗತಕಾಲದ ನಿರ್ಗಮನವನ್ನು ಗುರುತಿಸಿ, ಹೊಸ ನೌಕಾ ಧ್ವಜವನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ

ಕಾಲಡಿ ಗ್ರಾಮದ ಶ್ರೀ ಆದಿಶಂಕರ ಜನ್ಮಭೂಮಿ ಕ್ಷೇತ್ರಕ್ಕೆ ಪ್ರಧಾನಮಂತ್ರಿ ಭೇಟಿ

ಮಂಗಳೂರಿನಲ್ಲಿ ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

Posted On: 30 AUG 2022 11:12AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 1 ಮತ್ತು 2 ರಂದು ಕರ್ನಾಟಕ ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 1ರಂದು ಸಂಜೆ 6 ಗಂಟೆಗೆ ಕೊಚ್ಚಿನ್ ವಿಮಾನ ನಿಲ್ದಾಣದ ಬಳಿಯ ಕಾಲಡಿ ಗ್ರಾಮದಲ್ಲಿರುವ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳವಾದ ಶ್ರೀ ಆದಿ ಶಂಕರ ಜನ್ಮ ಭೂಮಿ ಕ್ಷೇತ್ರಕ್ಕೆ ಪ್ರಧಾನಮಂತ್ರಿ ಅವರು ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 2ರಂದು ಬೆಳಗ್ಗೆ 9.30ಕ್ಕೆ ಪ್ರಧಾನಮಂತ್ರಿ ಅವರು ಕೊಚ್ಚಿಯ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಐ.ಎನ್.ಎಸ್.ವಿಕ್ರಾಂತ್ ಎಂಬ ಹೆಸರಿನ ಮೊದಲ ಅನಿರ್ದಿಷ್ಟ ವಿಮಾನವಾಹಕ ನೌಕೆಯನ್ನು ನಿಯೋಜಿಸಲಿದ್ದಾರೆ.

ನಂತರ ಮಧ್ಯಾಹ್ನ 1.30ಕ್ಕೆ ಪ್ರಧಾನಮಂತ್ರಿ ಅವರು ಮಂಗಳೂರಿನಲ್ಲಿ ಸುಮಾರು 3800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.

ಕೊಚ್ಚಿಯಲ್ಲಿ ಪ್ರಧಾನ ಮಂತ್ರಿ

ಪ್ರಧಾನ ಮಂತ್ರಿ ಅವರು ಆತ್ಮನಿರ್ಭರತೆ(ಸ್ವಾವಲಂಬನೆ)ಯ ಬಲವಾದ ಪ್ರತಿಪಾದಕರಾಗಿದ್ದಾರೆ. ವಿಶೇಷವಾಗಿ ಆಯಕಟ್ಟಿನ ವಲಯಗಳಲ್ಲಿ, ರಕ್ಷಣಾ ವಲಯದಲ್ಲಿ ಸ್ವಾವಲಂಬನೆಯತ್ತ ಒಂದು ಮಹತ್ವದ ಹೆಜ್ಜೆ ಇಡಲಿರುವ ನಿಟ್ಟಿನಲ್ಲಿ, ಪ್ರಧಾನಮಂತ್ರಿ ಅವರು ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಲಾದ ಮೊದಲ ವಿಮಾನ ವಾಹಕ ನೌಕೆ ಐ.ಎನ್.ಎಸ್.ವಿಕ್ರಾಂತ್ ಅನ್ನು ನಿಯೋಜಿಸಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ಡಿಸೈನ್ ಬ್ಯೂರೋ (ಡಬ್ಲ್ಯೂಡಿಬಿ) ವಿನ್ಯಾಸಗೊಳಿಸಿದ ಮತ್ತು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಶಿಪ್ ಯಾರ್ಡ್ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಿಂದ ನಿರ್ಮಿಸಲಾದ ವಿಕ್ರಾಂತ್, ಅತ್ಯಾಧುನಿಕ ಸ್ವಯಂಚಾಲಿತ ವೈಶಿಷ್ಟ್ಯಗಳೊಂದಿಗೆ ರುಪುಗೊಂಡಿದೆ ಮತ್ತು ಇದು ಭಾರತದ ಸಾಗರ ಇತಿಹಾಸದಲ್ಲಿ ನಿರ್ಮಿಸಲಾದ ಅತಿದೊಡ್ಡ ಹಡಗಾಗಿದೆ.

1971 ರ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಮೊದಲ ವಿಮಾನ ವಾಹಕ ನೌಕೆಯಾದ ತನ್ನ ಪ್ರಸಿದ್ಧ ಪೂರ್ವಜ, ಸ್ಥಳೀಯ ವಿಮಾನ ವಾಹಕ ನೌಕೆಗೆ ಈ ಹೆಸರನ್ನು ಇಡಲಾಗಿದೆ. ಇದು ಹೆಚ್ಚಿನ ಸಂಖ್ಯೆಯ ದೇಶೀಯ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಹೊಂದಿದೆ, ಇದು ದೇಶದ ಪ್ರಮುಖ ಕೈಗಾರಿಕಾ ಸಂಸ್ಥೆಗಳನ್ನು ಮತ್ತು 100 ಕ್ಕೂ ಹೆಚ್ಚು ಎಂಎಸ್ಎಂಇಗಳನ್ನು ಒಳಗೊಂಡಿದೆ. ವಿಕ್ರಾಂತ್ ಕಾರ್ಯಾರಂಭದೊಂದಿಗೆ, ಭಾರತವು ಎರಡು ಕಾರ್ಯಾಚರಣೆಯ ವಿಮಾನ ವಾಹಕ ನೌಕೆಗಳನ್ನು ಹೊಂದಲಿದೆ, ಇದು ರಾಷ್ಟ್ರದ ಕಡಲ ಭದ್ರತೆಯನ್ನು ಹೆಚ್ಚಿಸುತ್ತದೆ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಸಾಹತುಶಾಹಿ ಭೂತಕಾಲವನ್ನು ತೊಡೆದುಹಾಕಿ, ಶ್ರೀಮಂತ ಭಾರತೀಯ ಸಾಗರ ಪರಂಪರೆಗೆ ಸರಿಹೊಂದುವ ಹೊಸ ನೌಕಾ ಧ್ವಜ  (ನಿಶಾನ್) ವನ್ನು ಅನಾವರಣಗೊಳಿಸುವರು.

ಮಂಗಳೂರಿನಲ್ಲಿ ಪ್ರಧಾನ ಮಂತ್ರಿ

ಪ್ರಧಾನಮಂತ್ರಿ ಅವರು ಮಂಗಳೂರಿನಲ್ಲಿ ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.

ನವಮಂಗಳೂರು ಬಂದರು ಪ್ರಾಧಿಕಾರವು ಕೈಗೆತ್ತಿಕೊಂಡಿರುವ ಕಂಟೈನರ್‌ಗಳು ಮತ್ತು ಇತರ ಸರಕುಗಳನ್ನು ನಿರ್ವಹಿಸಲು ಲಂಗರು ನಂ. 14 ರ ಯಾಂತ್ರೀಕರಣಕ್ಕಾಗಿ 280 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯೋಜನೆಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ.

ಯಾಂತ್ರೀಕೃತ ಟರ್ಮಿನಲ್ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಟರ್ನ್ ಆರೌಂಡ್ (ಸುತ್ತುವ) ಸಮಯ, ಪೂರ್ವ-ಲಂಗರು ವಿಳಂಬ ಮತ್ತು ಬಂದರಿನಲ್ಲಿ ವಾಸಿಸುವ ಸಮಯವನ್ನು ಸುಮಾರು ಶೇಕಡಾ 35 ರಷ್ಟು ಕಡಿಮೆ ಮಾಡುತ್ತದೆ, ಇದರಿಂದಾಗಿ ವ್ಯಾಪಾರ ವಾತಾವರಣಕ್ಕೆ ಉತ್ತೇಜನ ಲಭಿಸುತ್ತದೆ. ಯೋಜನೆಯ ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ, ಆ ಮೂಲಕ ನಿರ್ವಹಣಾ ಸಾಮರ್ಥ್ಯಕ್ಕೆ 4.2 ಎಂಟಿಪಿಎ ಅನ್ನು ಸೇರಿಸಲಾಗಿದೆ, ಇದು 2025 ರ ವೇಳೆಗೆ 6 ಎಂಟಿಪಿಎಗೆ ಮತ್ತಷ್ಟು ಹೆಚ್ಚಾಗುತ್ತದೆ.

ಪ್ರಧಾನಮಂತ್ರಿ ಅವರು, ಬಂದರು ಕೈಗೆತ್ತಿಕೊಂಡಿರುವ ಸುಮಾರು 1000 ಕೋಟಿ ರೂ.ಗಳ ಐದು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಅತ್ಯಾಧುನಿಕ ಕ್ರಯೋಜೆನಿಕ್ ಎಲ್ ಪಿಜಿ ಶೇಖರಣೆ ಟ್ಯಾಂಕ್ ಟರ್ಮಿನಲ್ ಹೊಂದಿರುವ ಇಂಟಿಗ್ರೇಟೆಡ್ ಎಲ್ ಪಿಜಿ ಮತ್ತು ಬಲ್ಕ್ ಲಿಕ್ವಿಡ್ ಪಿಒಎಲ್ ಸೌಲಭ್ಯವು 45,000 ಟನ್ ಗಳ ಪೂರ್ಣ ತುಂಬಿರುವ ವಿಎಲ್ ಜಿಸಿ (ಬಹಳ ದೊಡ್ಡ ಅನಿಲ ವಾಹಕಗಳು) ಅನ್ನು ಅತ್ಯಂತ ದಕ್ಷ ರೀತಿಯಲ್ಲಿ ಇಳಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಸೌಲಭ್ಯವು ಈ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಬಲಪಡಿಸುತ್ತದೆ ಮತ್ತು ದೇಶದ ಉನ್ನತ ಎಲ್ ಪಿಜಿ ಆಮದು ಬಂದರುಗಳಲ್ಲಿ ಒಂದಾಗಿ ಬಂದರಿನ ಸ್ಥಾನಮಾನವನ್ನು ಬಲಪಡಿಸುತ್ತದೆ. ಶೇಖರಣಾ ಟ್ಯಾಂಕ್ ಗಳು ಮತ್ತು ಖಾದ್ಯ ತೈಲ ಸಂಸ್ಕರಣಾಗಾರಗಳ ನಿರ್ಮಾಣ, ಬಿಟುಮೆನ್ (ಪೆಟ್ರೋಲಿಯಂನ ಒಂದು ಉತ್ಪನ್ನ) ಸಂಗ್ರಹಣಾ ಮತ್ತು ಸಂಬಂಧಿತ ಸೌಲಭ್ಯಗಳ ನಿರ್ಮಾಣ ಮತ್ತು ಬಿಟುಮೆನ್ (ಪೆಟ್ರೋಲಿಯಂನ ಒಂದು ಉತ್ಪನ್ನ) ಮತ್ತು ಖಾದ್ಯ ತೈಲ ಸಂಗ್ರಹ ಮತ್ತು ಸಂಬಂಧಿತ ಸೌಲಭ್ಯಗಳ ನಿರ್ಮಾಣ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸುವರು.

 ಈ ಯೋಜನೆಗಳು ಬಿಟುಮೆನ್ (ಪೆಟ್ರೋಲಿಯಂನ ಒಂದು ಉತ್ಪನ್ನ) ಮತ್ತು ಖಾದ್ಯ ತೈಲ ಹಡಗುಗಳ  ಸಂಚಾರದ ಸಮಯವನ್ನು ಸುಧಾರಿಸುತ್ತವೆ ಹಾಗು ವ್ಯಾಪಾರದ ಒಟ್ಟಾರೆ ಸರಕು ವೆಚ್ಚವನ್ನು ಕಡಿಮೆ ಮಾಡುತ್ತವೆ. ಪ್ರಧಾನಮಂತ್ರಿ ಅವರು ಕುಳಾಯಿಯಲ್ಲಿ ಮೀನುಗಾರಿಕಾ ಬಂದರಿನ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಇದು ಮೀನು ಹಿಡಿಯುವಿಕೆಯನ್ನು ಸುರಕ್ಷಿತವಾಗಿ ನಿರ್ವಹಿಸಲು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಗಳಿಗೆ ಅನುವು ಮಾಡಿಕೊಡುತ್ತದೆ. ಸಾಗರಮಾಲಾ ಕಾರ್ಯಕ್ರಮದ ಆಶ್ರಯದಡಿಯಲ್ಲಿ ಈ ಕೆಲಸವನ್ನು ಕೈಗೊಳ್ಳಲಾಗುವುದು ಮತ್ತು ಇದು ಮೀನುಗಾರ ಸಮುದಾಯಕ್ಕೆ ಗಮನಾರ್ಹವಾದ ಸಾಮಾಜಿಕ-ಆರ್ಥಿಕ ಪ್ರಯೋಜನಗಳಿಗೆ ಕಾರಣವಾಗುತ್ತದೆ.

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಕೈಗೆತ್ತಿಕೊಂಡಿರುವ ಎರಡು ಯೋಜನೆಗಳಾದ ಬಿಎಸ್ ವಿಐ ಉನ್ನತೀಕರಣ ಯೋಜನೆ ಮತ್ತು ಸಮುದ್ರ ನೀರು ಶುದ್ಧೀಕರಣ ಘಟಕವನ್ನು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ಸುಮಾರು 1830 ಕೋಟಿ ರೂ.ಗಳ ಬಿಎಸ್-6 ಉನ್ನತೀಕರಣ ಯೋಜನೆಯು  ಅತ್ಯಂತ ಶುದ್ಧ ಪರಿಸರ ಸ್ನೇಹಿ ಬಿಎಸ್-6 ಗ್ರೇಡ್ ಇಂಧನ (10 ಪಿಪಿಎಂ ಗಿಂತ ಕಡಿಮೆ ಸಲ್ಫರ್ ಅಂಶವಿರುವ) ಉತ್ಪಾದನೆಗೆ ಅನುವು ಮಾಡಿಕೊಡಲಿದೆ. ಸುಮಾರು 680 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾದ ಸಮುದ್ರ ನೀರು ಶುದ್ಧೀಕರಣ ಘಟಕವು ಶುದ್ಧ ನೀರಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ವರ್ಷವಿಡೀ ಹೈಡ್ರೋಕಾರ್ಬನ್ ಗಳು ಮತ್ತು ಪೆಟ್ರೋಕೆಮಿಕಲ್ ಗಳ ನಿಯಮಿತ ಪೂರೈಕೆಯನ್ನು ಖಚಿತಪಡಿಸುತ್ತದೆ. ದಿನಕ್ಕೆ 30 ಮಿಲಿಯನ್ ಲೀಟರ್ (ಎಂಎಲ್ ಡಿ) ಸಾಮರ್ಥ್ಯವನ್ನು ಹೊಂದಿರುವ ಈ ಸ್ಥಾವರವು ಸಮುದ್ರದ ನೀರನ್ನು ಸಂಸ್ಕರಣಾ ಪ್ರಕ್ರಿಯೆಗಳಿಗೆ ಅಗತ್ಯವಿರುವ ನೀರಾಗಿ ಪರಿವರ್ತಿಸುತ್ತದೆ.

 

*****************


(Release ID: 1855466) Visitor Counter : 235