ಪ್ರಧಾನ ಮಂತ್ರಿಯವರ ಕಛೇರಿ

ಸ್ವಾತಂತ್ರ್ಯ ಹೋರಾಟಗಾರ ವಿ.ಒ. ಚಿದಂಬರಂ ಪಿಳ್ಳೈ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 05 SEP 2022 9:22AM by PIB Bengaluru


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ ವಿ.ಒ. ಚಿದಂಬರಂ ಪಿಳ್ಳೈ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಮಹಾನ್‌ ಹೋರಾಟಗಾರ ವಿ.ಒ. ಚಿದಂಬರಂ ಪಿಳ್ಳೈ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಸ್ವಾತಂತ್ರ್ಯ ಸಂಗ್ರಾಮಕ್ಕೆ ಅವರು ನೀಡಿದ ಅಪಾರ ಕೊಡುಗೆಗಾಗಿ ನಮ್ಮ ರಾಷ್ಟ್ರವು ಅವರಿಗೆ ಋಣಿಯಾಗಿದೆ. ಆರ್ಥಿಕ ಪ್ರಗತಿ ಮತ್ತು ಸ್ವಾವಲಂಬಿಗಳಾಗಲು ಅವರು ಹೆಚ್ಚಿನ ಒತ್ತು ನೀಡಿದರು. ಅವರ ಆದರ್ಶಗಳು ನಮಗೆ ಸದಾ ಸ್ಫೂರ್ತಿದಾಯಕವಾಗಿವೆ.ʼ


 

*****



(Release ID: 1856829) Visitor Counter : 190