ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಸೈರಸ್ ಮಿಸ್ತ್ರಿ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ

ಪ್ರಕಟಣಾ ದಿನಾಂಕ: 04 SEP 2022 6:06PM by PIB Bengaluru


ಶ್ರೀ ಸೈರಸ್ ಮಿಸ್ತ್ರಿಯವರ ಅಕಾಲಿಕ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಭಾರತದ ಆರ್ಥಿಕ ಸಾಮರ್ಥ್ಯದಲ್ಲಿ ಬಹಳ ನಂಬಿಕೆ ಹೊಂದಿದ್ದ ಭರವಸೆಯ ಉದ್ಯಮಿಯಾಗಿದ್ದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ತಮ್ಮ ಟ್ವೀಟ್ ಸಂದೇಶಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;

"ಶ್ರೀ ಸೈರಸ್ ಮಿಸ್ತ್ರಿ ಅವರ ಅಕಾಲಿಕ ನಿಧನ ಆಘಾತಕಾರಿಯಾಗಿದೆ. ಅವರು ಭಾರತದ ಆರ್ಥಿಕ ಸಾಮರ್ಥ್ಯದಲ್ಲಿ ನಂಬಿಕೆ ಇಟ್ಟಿದ್ದ ಭರವಸೆಯ ಉದ್ಯಮಿಯಾಗಿದ್ದರು. ಅವರ ನಿಧನವು ವಾಣಿಜ್ಯ ಮತ್ತು ಉದ್ಯಮ ಜಗತ್ತಿಗೆ ಬಹಳ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ."

 

*****
 


(ಪ್ರಕಟಣೆ ಐ.ಡಿ.: 1856835) ವಿಸಿಟರ್ ಕೌಂಟರ್ : 195