ಪ್ರಧಾನ ಮಂತ್ರಿಯವರ ಕಛೇರಿ
ಡೈಮಂಡ್ ಲೀಗ್ ಟ್ರೋಫಿ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
09 SEP 2022 2:54PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರತಿಷ್ಠಿತ ಡೈಮಂಡ್ ಲೀಗ್ ಟ್ರೋಫಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಮತ್ತೊಮ್ಮೆ ಇತಿಹಾಸ ಬರೆದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
‘‘ ಪ್ರತಿಷ್ಠಿತ ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಭಾಜನರಾಗುವ ಮೂಲಕ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ @Neeraj_chopra ಅವರಿಗೆ ಅಭಿನಂದನೆಗಳು. ಅವರು ಉತ್ತಮ ಸಮರ್ಪಣೆ ಮತ್ತು ಸ್ಥಿರತೆಯನ್ನು ಪ್ರದರ್ಶಿಸಿದ್ದಾರೆ. ಅವರ ಪುನರಾವರ್ತಿತ ಯಶಸ್ಸುಗಳು ಭಾರತೀಯ ಅಥ್ಲೆಟಿಕ್ಸ್ ಒಕ್ಕೂಟ ಮಾಡುತ್ತಿರುವ ದೊಡ್ಡ ದಾಪುಗಾಲುಗಳನ್ನು ಬಿಂಬಿಸುತ್ತದೆ,’’ ಎಂದಿದ್ದಾರೆ.
*****
(ಪ್ರಕಟಣೆ ಐ.ಡಿ.: 1858308)
ವಿಸಿಟರ್ ಕೌಂಟರ್ : 154
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam