ಪ್ರಧಾನ ಮಂತ್ರಿಯವರ ಕಛೇರಿ

ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ

Posted On: 11 SEP 2022 6:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;

"ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯರಾದ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ನಿಧನದಿಂದ ಅತೀವ ದುಃಖವಾಗಿದೆ. ಈ ಶೋಕದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ! "

*****

 



(Release ID: 1858659) Visitor Counter : 118