ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

 
ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ

Posted On: 13 SEP 2022 9:30AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್)ಯಿಂದ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

"ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳನ್ನು ಮೃತರ ಕುಟುಂಬಕ್ಕೆ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು: ಪಿಎಂ@narendramodi ''

*****


(Release ID: 1859062) Visitor Counter : 127