ಪ್ರಧಾನ ಮಂತ್ರಿಯವರ ಕಛೇರಿ
ಭಾರತಕ್ಕೆ ಬಂದಿರುವ ಫ್ರಾನ್ಸ್ ನ ಯುರೋಪ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಿಂದ ಪ್ರಧಾನ ಮಂತ್ರಿಯವರ ಭೇಟಿ
प्रविष्टि तिथि:
14 SEP 2022 5:51PM by PIB Bengaluru
2022 ರ ಸೆಪ್ಟೆಂಬರ್ 13 ರಿಂದ 15 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಫ್ರಾನ್ಸ್ ನ ಯುರೋಪ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವೆ ಶ್ರೀಮತಿ ಕ್ಯಾಥರೀನ್ ಕೊಲೊನ್ನಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ದ್ವಿಪಕ್ಷೀಯ ಮತ್ತು ಪರಸ್ಪರ ಹಿತಾಸಕ್ತಿಯ ಇತರ ವಿಷಯಗಳ ಬಗ್ಗೆ ಚರ್ಚಿಸುವುದರ ಜೊತೆಗೆ, ಅಧ್ಯಕ್ಷ ಮ್ಯಾಕ್ರನ್ ಅವರ ಸ್ನೇಹ ಮತ್ತು ಸಹಕಾರದ ಸಂದೇಶವನ್ನು ಸಚಿವರು ಪ್ರಧಾನಮಂತ್ರಿಯವರಿಗೆ ತಿಳಿಸಿದರು. ಪ್ಯಾರಿಸ್ ನಲ್ಲಿ ಅಧ್ಯಕ್ಷ ಮ್ಯಾಕ್ರೋನ್ ಮತ್ತು ಜರ್ಮನಿಯ ಶ್ಲೋಸ್ ಎಲ್ಮೌ ಅವರೊಂದಿಗಿನ ತಮ್ಮ ಇತ್ತೀಚಿನ ಭೇಟಿಗಳನ್ನು ಹಾರ್ದಿಕವಾಗಿ ಸ್ಮರಿಸಿದ ಪ್ರಧಾನ ಮಂತ್ರಿ ಮೋದಿ, ಶೀಘ್ರದಲ್ಲೇ ಭಾರತಕ್ಕೆ ಅಧ್ಯಕ್ಷರನ್ನು ಸ್ವಾಗತಿಸುವ ಬಯಕೆಯನ್ನು ವ್ಯಕ್ತಪಡಿಸಿದರು.
(रिलीज़ आईडी: 1859380)
आगंतुक पटल : 205
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam