ಪ್ರಧಾನ ಮಂತ್ರಿಯವರ ಕಛೇರಿ
ಪೂಂಚ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ
ಸಂತ್ರಸ್ತ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್ ನಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
14 SEP 2022 4:25PM by PIB Bengaluru
ಪೂಂಚ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಪ್ರಧಾನಿಯವರ ಕಚೇರಿ ಟ್ವೀಟ್ ಮಾಡಿದೆ;
“ಪೂಂಛ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪ್ರತಿ ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು” ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.
ಪೂಂಛ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪ್ರತಿ ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ
*****
(ಪ್ರಕಟಣೆ ಐ.ಡಿ.: 1859381)
ವಿಸಿಟರ್ ಕೌಂಟರ್ : 131
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam