ಪ್ರಧಾನ ಮಂತ್ರಿಯವರ ಕಛೇರಿ

ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

Posted On: 16 SEP 2022 8:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಾಂಘೈ ಸಹಕಾರ ಸಂಘಟನೆಯ (ಎಸ್ ಸಿಒ) 22ನೇ ಸಭೆಯ ನೇಪಥ್ಯದಲ್ಲಿ ಇಂದು ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದರು.

ವಿವಿಧ ಹಂತಗಳಲ್ಲಿನ ಸಂಪರ್ಕಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳಲ್ಲಿ ಸುಸ್ಥಿರ ಆವೇಗವನ್ನು ನಾಯಕರು ಶ್ಲಾಘಿಸಿದರು. ಈ ತಿಂಗಳ ಆರಂಭದಲ್ಲಿ ವ್ಲಾಡಿವೊಸ್ಟಾಕ್ ನಲ್ಲಿ ನಡೆದ ಪೂರ್ವ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿಯ ವೀಡಿಯೊ ಸಂದೇಶಕ್ಕೆ ಅಧ್ಯಕ್ಷ ಪುಟಿನ್ ಮೆಚ್ಚುಗೆ ವ್ಯಕ್ತಪಡಿಸಿದರು.

ದ್ವಿಪಕ್ಷೀಯ ಸಹಕಾರದ ಪ್ರಮುಖ ವಿಷಯಗಳು ಮತ್ತು ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ನಾಯಕರು ಚರ್ಚಿಸಿದರು. ಪ್ರಸ್ತುತ ಭೌಗೋಳಿಕ-ರಾಜಕೀಯ ಪರಿಸ್ಥಿತಿಯಿಂದ ಹೊರಹೊಮ್ಮುವ ಸವಾಲುಗಳ ಹಿನ್ನೆಲೆಯಲ್ಲಿ ಜಾಗತಿಕ ಆಹಾರ ಭದ್ರತೆ, ಇಂಧನ ಭದ್ರತೆ ಮತ್ತು ರಸಗೊಬ್ಬರಗಳ ಲಭ್ಯತೆಗೆ ಸಂಬಂಧಿಸಿದ ಚರ್ಚೆಗಳು ನಡೆದವು.

ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ವೈರತ್ವವನ್ನು ಶೀಘ್ರವಾಗಿ ನಿಲ್ಲಿಸಲು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಅಗತ್ಯವನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದರು.

ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸುವ ಈ ವರ್ಷ ಉಭಯ ನಾಯಕರ ಮೊದಲ ಸಭೆ ಇದಾಗಿದೆ. ಅವರು ಸಂಪರ್ಕದಲ್ಲಿರಲು ಸಮ್ಮತಿಸಿದರು.

*****(Release ID: 1860439) Visitor Counter : 117