ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಬಿಷ್ಣು ಚರಣ್ ಸೇಥಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 19 SEP 2022 2:19PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಾರ್ಟಿಯ ಒಡಿಶಾ ಘಟಕದ ನಾಯಕ ಶ್ರೀ ಬಿಷ್ಣು ಚರಣ್ ಸೇಥಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

" ಶ್ರೀ ಬಿಷ್ಣು ಚರಣ್ ಸೇಥಿ ಜೀ ಅವರು ಒಡಿಶಾದ ಪ್ರಗತಿಗೆ ಅಸಾಧಾರಣ ಕೊಡುಗೆ ನೀಡಿದ್ದಾರೆ. ಅವರು ಕಠಿಣ ಶ್ರಮಜೀವಿ ಶಾಸಕರಾಗಿ ತಮ್ಮನ್ನು ಗುರುತಿಸಿಕೊಂಡಿದ್ದರು ಮತ್ತು ಸಾಮಾಜಿಕ ಸಬಲೀಕರಣಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ," ಎಂದಿದ್ದಾರೆ.

 

*****(Release ID: 1860609) Visitor Counter : 35