ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಪ್ರವಾಸಿ ವಾಹನ ಕಮರಿಗೆ ಬಿದ್ದು ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಿ ಸಂತಾಪ

Posted On: 26 SEP 2022 10:42AM by PIB Bengaluru

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಪ್ರವಾಸಿ ವಾಹನವೊಂದು ಕಮರಿಗೆ ಬಿದ್ದು ಸಂಭವಿಸಿದ ಪ್ರಾಣ ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದಿರುವ ಅವರು,  ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಈ ಕುರಿತು ಪ್ರಧಾನಿ ಕಾರ್ಯಾಲಯವು ಟ್ವೀಟ್ ಮಾಡಿದೆ.

"ಹಿಮಾಚಲ ಪ್ರದೇಶದ ಕುಲುವಿನಲ್ಲಿ ಪ್ರವಾಸಿ ವಾಹನವೊಂದು ಕಮರಿಗೆ ಬಿದ್ದಿರುವುದು ಅತ್ಯಂತ ದುಃಖದ ಘಟನೆಯಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ., ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ”: ಪ್ರಧಾನ ಮಂತ್ರಿ

 

********


(Release ID: 1862257) Visitor Counter : 159