ಪ್ರಧಾನ ಮಂತ್ರಿಯವರ ಕಛೇರಿ
ʻಡಬ್ಲ್ಯುಐಪಿಒʼದ (WIPO) ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ 40ನೇ ರ‍್ಯಾಂಕ್ ಗಳಿಸಿರುವ ಹಿನ್ನೆಲೆಯಲ್ಲಿ ನಮ್ಮ ಅನ್ವೇಷಕರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಿ
Posted On:
29 SEP 2022 9:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, `ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆʼಯ (ಡಬ್ಲ್ಯುಐಪಿಒ) ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತ 40ನೇ ಸ್ಥಾನಕ್ಕೆ ಜಿಗಿದಿರುವ ಹಿನ್ನೆಲೆಯಲ್ಲಿ ಭಾರತೀಯ ಅನ್ವೇಷಕರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ, ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.
"ಹೊಸತಿನ ಶೋಧವು ಭಾರತದಾದ್ಯಂತ ಸಂಚಲನ ಮೂಡಿಸುತ್ತದೆ. ನಮ್ಮ ಅನ್ವೇಷಕರ ಬಗ್ಗೆ ಹೆಮ್ಮೆ ಇದೆ. ನಾವು ಬಹಳ ದೂರ ಸಾಗಿ ಬಂದಿದ್ದೇವೆ ಮತ್ತು ಇನ್ನೂ ಹೊಸ ಎತ್ತರವನ್ನು ಏರಲು ಬಯಸುತ್ತೇವೆ."
****
(Release ID: 1863639)
Visitor Counter : 126
Read this release in:
English
,
Gujarati
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Odia
,
Tamil
,
Telugu
,
Malayalam