ಪ್ರಧಾನ ಮಂತ್ರಿಯವರ ಕಛೇರಿ
ಕಾನ್ಪುರದಲ್ಲಿ ಟ್ರ‍್ಯಾಕ್ಟರ್ ಟ್ರಾಲಿ ಹಳ್ಳಕ್ಕೆ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಸಂತಾಪ
ದುರಂತದಲ್ಲಿ ಮೃತಪಟ್ಟವರ ಕುಟುಂಬದವರು ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ
Posted On:
01 OCT 2022 10:30PM by PIB Bengaluru
ಕಾನ್ಪುರದಲ್ಲಿ ಶನಿವಾರ ಟ್ರ‍್ಯಾಕ್ಟರ್ ಟ್ರಾಲಿ ಹಳ್ಳಕ್ಕೆ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸಲ್ಲಿಸಿದ್ದಾರೆ.
ಹಾಗೆಯೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್)ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿಗಳು ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿಗಳು ಟ್ವೀಟ್ ಮಾಡಿದ್ದಾರೆ. "ಕಾನ್ಪುರದಲ್ಲಿ ಸಂಭವಿಸಿದ ಟ್ರ‍್ಯಾಕ್ಟರ್ ಟ್ರಾಲಿ ದುರಂತವು ತೀವ್ರ ನೋವು ತಂದಿದೆ. ತಮ್ಮವರನ್ನು ಕಳೆದುಕೊಂಡ ಸಂಬಂಧಿಗಳು, ಆಪ್ತರಿಗೆ ನನ್ನ ಸಾಂತ್ವನವಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ತೊಂದರೆಗೆ ಸಿಲುಕಿದವರಿಗೆ ಸ್ಥಳೀಯ ಆಡಳಿತವು ಅಗತ್ಯವಿರುವ ಎಲ್ಲ ನೆರವು ಒದಗಿಸಲಿದೆ,ʼʼ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
"ಹಾಗೆಯೇ ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು,ʼʼ ಎಂದು ಘೋಷಿಸಿದ್ದಾರೆ.
*****
(Release ID: 1864723)
Visitor Counter : 113
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam