ಪ್ರಧಾನ ಮಂತ್ರಿಯವರ ಕಛೇರಿ
ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
ದೆಹಲಿಯ ಪ್ರಧಾನ ಮಂತ್ರಿ ಸಂಗ್ರಾಹಾಲಯದಲ್ಲಿರುವ ಲಾಲ್ ಬಹಾದುರ್ ಶಾಸ್ತ್ರಿ ಅವರ ಗ್ಯಾಲರಿಯಿಂದ ಕೆಲವು ಇಣುಕುನೋಟಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ
प्रविष्टि तिथि:
02 OCT 2022 9:15AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ‘ಪ್ರಧಾನಮಂತ್ರಿಯವರು ಲಾಲ್ ಬಹಾದುರ್ ಶಾಸ್ತ್ರಿ ಅವರ ಕುರಿತು ತಮ್ಮ ಅನಿಸಿಕೆಗಳ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿರುವ ಲಾಲ್ ಬಹಾದುರ್ ಶಾಸ್ತ್ರಿ ಗ್ಯಾಲರಿಯಿಂದ ಪ್ರಧಾನಮಂತ್ರಿಯಾಗಿ ಅವರ ಜೀವನ ಪಯಣ ಮತ್ತು ಸಾಧನೆಗಳನ್ನು ಪ್ರದರ್ಶಿಸುವ ಕೆಲವು ಇಣುಕುನೋಟಗಳನ್ನು ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಲಾಲ್ ಬಹಾದುರ್ ಶಾಸ್ತ್ರಿ ಅವರ ಸರಳತೆ ಮತ್ತು ನಿರ್ಣಾಯಕತೆಗಾಗಿ ಭಾರತದಾದ್ಯಂತ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಮ್ಮ ಇತಿಹಾಸದ ಅತ್ಯಂತ ನಿರ್ಣಾಯಕ ಸಮಯದಲ್ಲಿ ಅವರ ಕಠಿಣ ನಾಯಕತ್ವವು ಸದಾ ನೆನಪಿನಲ್ಲಿ ಉಳಿಯುತ್ತದೆ. ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು".
"ಇಂದು, ಶಾಸ್ತ್ರಿ ಅವರ ಜಯಂತಿಯಂದು ನಾನು ದೆಹಲಿಯ ಪ್ರಧಾನ ಮಂತ್ರಿ ಸಂಗ್ರಹಾಲಯದಲ್ಲಿರುವ ಅವರ ಗ್ಯಾಲರಿಯಿಂದ ಅವರ ಕುರಿತ ಕೆಲವು ಇಣುಕುನೋಟಗಳನ್ನು ಹಂಚಿಕೊಳ್ಳುತ್ತಿದ್ದೇನೆ, ಇದು ಪ್ರಧಾನಿಯಾಗಿ ಅವರ ಜೀವನ ಪಯಣ ಮತ್ತು ಸಾಧನೆಗಳನ್ನು ಪ್ರದರ್ಶಿಸುತ್ತದೆ. ಮ್ಯೂಸಿಯಂಗೆ ಭೇಟಿ ಕೊಡಿ..."
****
(रिलीज़ आईडी: 1864724)
आगंतुक पटल : 205
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam