ಪ್ರಧಾನ ಮಂತ್ರಿಯವರ ಕಛೇರಿ
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲು ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸುವಂತೆ ಜನರಿಗೆ ಒತ್ತಾಯ
प्रविष्टि तिथि:
02 OCT 2022 9:30AM by PIB Bengaluru
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲು ಜನತೆ ಖಾದಿ ಮತ್ತು ಕರಕುಶಲ ವಸ್ತುಗಳನ್ನು ಖರೀದಿಸುವಂತೆ ಜನರನ್ನು ಒತ್ತಾಯಿಸಿದ್ದಾರೆ. ಭಾರತ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಾಂಧಿ ಜಯಂತಿ ಹೆಚ್ಚು ವಿಶೇಷವಾಗಿದೆ. ಮಹಾತ್ಮ ಗಾಂಧೀಜಿ ಅವರ ಚಿಂತನೆಗಳ ಕುರಿತಾದ ವಿಡಿಯೋವೊಂದನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು :
"ಮಹಾತ್ಮ ಗಾಂಧಿ ಅವರಿಗೆ #ಗಾಂಧಿ ಜಯಂತಿ ಸಂದರ್ಭದಲ್ಲಿ ಗೌರವ ನಮನಗಳು. ಈ ಬಾರಿಯ ಗಾಂಧೀ ಜಯಂತಿ ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹೆಚ್ಚು ವಿಶೇಷತೆ ಪಡೆದುಕೊಂಡಿದೆ. ನಾವು ಯಾವಾಗಲೂ ಬಾಪು ಅವರ ಆದರ್ಶನಗಳನ್ನು ಪಾಲಿಸೋಣ. ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲು ಕರಕುಶಲ ವಸ್ತುಗಳು ಮತ್ತು ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ನಿಮ್ಮೆಲ್ಲರನ್ನು ಒತ್ತಾಯಿಸುತ್ತಿದ್ದೇನೆ. " ಎಂದು ಹೇಳಿದ್ದಾರೆ.
*****
(रिलीज़ आईडी: 1864770)
आगंतुक पटल : 343
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam