ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

प्रविष्टि तिथि: 04 OCT 2022 9:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಅವರು ಅವರ ಕುರಿತಾದ ತಮ್ಮ ಭಾಷಣವನ್ನು ಹಂಚಿಕೊಂಡರು, ಅದರಲ್ಲಿ ಅವರು ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಶ್ರೇಷ್ಠತೆಯ ಬಗ್ಗೆ ಮಾತನಾಡಿದ್ದಾರೆ.

 ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

" ಧೀರ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಭಾರತದ ಈ ನಿರ್ಭೀತ ಮಗ, ದೇಶವನ್ನು ಸ್ವತಂತ್ರಗೊಳಿಸಲು ಮತ್ತು ನಮ್ಮ ಜನರಲ್ಲಿ ಹೆಮ್ಮೆಯ ಮನೋಭಾವವನ್ನು ಬೆಳೆಸಲು ತನ್ನ ಜೀವನವನ್ನು ಮುಡಿಪಾಗಿಟ್ಟರು. ಅವರ ಬಗೆಗಿನ ನನ್ನ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ, ಅದರಲ್ಲಿ ನಾನು ಅವರ ಶ್ರೇಷ್ಠತೆಯ ಬಗ್ಗೆ ಮಾತನಾಡಿದ್ದೇನೆ." ಎಂದು ಹೇಳಿದ್ದಾರೆ.

***

 

 

 


(रिलीज़ आईडी: 1865009) आगंतुक पटल : 184
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam