ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಾಖಂಡ್‌ನ ಪೌರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ 

Posted On: 05 OCT 2022 9:07AM by PIB Bengaluru

ಉತ್ತರಾಖಂಡ್‌ನ ಪೌರಿಯಲ್ಲಿ ಬಸ್ ಅಪಘಾತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಹಾರೈಸಿದ್ದಾರೆ.

ಈ ಕುರಿತು ಪ್ರಧಾನಿ ಕಾರ್ಯಾಲಯವು ಟ್ವೀಟ್ ಮಾಡಿದೆ;

"ಉತ್ತರಾಖಂಡದ ಪೌರಿಯಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತ ಘಳಿಗೆಯಲ್ಲಿ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುವುದು”: ಪ್ರಧಾನಿ

 

******



(Release ID: 1865373) Visitor Counter : 121