ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ರಸ್ತೆ ಅಪಘಾತ; ಜೀವಹಾನಿಗೆ ಪ್ರಧಾನ ಮಂತ್ರಿ ಶೋಕ


ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಧನ ಪ್ರಕಟ

ಪ್ರಕಟಣಾ ದಿನಾಂಕ: 06 OCT 2022 2:11PM by PIB Bengaluru

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮರಣ ಹೊಂದಿದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಧನವನ್ನು ಅವರು ಪ್ರಕಟಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ;

“ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ”.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಧನ ಪ್ರಕಟಿಸಿದ್ದಾರೆ.

*****


(ಪ್ರಕಟಣೆ ಐ.ಡಿ.: 1865613) ವಿಸಿಟರ್ ಕೌಂಟರ್ : 197